Breaking News

ಎಂಇಎಸ್ ಪುಂಡರನ್ನು ಹದ್ದು ಬಸ್ತಿನಲ್ಲಿ ಇಟ್ಟುಕೊಳ್ಳುವದು ನಮಗೆ ಗೊತ್ತು ಸಿಎಂ ಬೊಮ್ಮಾಯಿ ಎಚ್ಚರಿಕೆ..!

ಹುಬ್ಬಳ್ಳಿ: ಬೆಳಗಾವಿ ಅಧಿವೇಶ ಸಮಯದಲ್ಲಿ ಎಂಇಎಸ್ ಪುಂಡಾಟಿಕೆ ಇದೇ ಮೊದಲಲ್ಲ. ಕಳೆದ 50 ವರ್ಷದಿಂದ ಎಂಇಎಸ್ ಪುಂಡಾಟ ಮಾಡುತ್ತಲೇ ಬಂದಿದೆ. ಅವರನ್ನು ಯಾವ ರೀತಿ ಹದ್ದು ಬಸ್ತಿನಲ್ಲಿ ಇಡಬೇಕು ನಮಗೆ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿಯ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಎಂಇಎಸ್ ಪುಂಡಾಟಿಕೆ ತಡೆಗಟ್ಟುವ ಕೆಲಸವನ್ನು ನಾವು ಮಾಡುತ್ತೇವೆ ಎಂದರು.

ಡಿ.ಕೆ ಶಿವಕುಮಾರ್ ಕುಕ್ಕರ್ ಬಾಂಬ್ ವಿಚಾರವನ್ನು ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರು ಜವಾಬ್ದಾರಿ ಸ್ಥಾನದಲ್ಲಿ ಇದ್ದಾರೆ. ಮೊದಲು ಕೆಪಿಸಿಸಿ ಅಧ್ಯಕ್ಷರ ಹೇಳಿಕೆಯನ್ನು ಗಮನಿಸಿ ಪ್ರತಿಕ್ರಿಯೆ ನೀಡಬೇಕು. ಅದೊಂದು ಆಕಸ್ಮಿಕ ಘಟನೆ, ಪ್ರೆಶರ್ ಕುಕ್ಕರ್ ನಿಂದ ಆಗಿದ್ದು, ಅಂತ ಹೇಳಿದ್ದಾರೆ. ಶಿವಕುಮಾರ್ ಹೇಳಿದ ಮಾತು ಕೇಳಿಸಿಕೊಂಡು ಮಾತನಾಡಲಿ ಎಂದು ತಿರುಗೇಟು ನೀಡಿದರು

ಬೆಳಗಾವಿ ಅಧಿವೇಶನದಲ್ಲಿ ಕೆಲವು ಮಹತ್ವದ ಬಿಲ್ ತರುತ್ತಿದ್ದೇವೆ. ಎಸ್ಸಿ ಎಸ್ಟಿ ಮೀಸಲಾತಿ ಜಾರಿ ಬಿಲ್ ಪ್ರಮುಖವಾಗಿ ಚರ್ಚೆಗೆ ಬರಲಿದೆ. ಬೆಳಗಾವಿ ಅಧಿವೇಶನದಲ್ಲಿ ಆರ್ಡಿನೆನ್ಸ್ ರೀಪ್ರೇಮೆಂಟ್ ಬಿಲ್ ಬರುತ್ತದೆ. ಉತ್ತರ ಕರ್ನಾಟಕ ಭಾಗದ ಪ್ರಮುಖ ವಿಚಾರಗಳು ಚೆರ್ಚೆಗೆ ಬರಲಿದ್ದು, ಅದಕ್ಕೆ ಸರ್ಕಾರ ಉತ್ತರ ನೀಡಲಿದೆ ಎಂದರು.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *