ಹುಬ್ಬಳ್ಳಿ: ರಾಜ್ಯದಲ್ಲಿ ಭ್ರಷ್ಟಾಚಾರ, ಮತಕಳವು ಪ್ರಕರಣವನ್ನು ವಿಷಯಾಂತರ ಮಾಡಲು ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು.
ಕುಕ್ಕರ್ ಬ್ಲಾಸ್ಟ್ ವಿಚಾರದಲ್ಲಿ ನನ್ನ ಬಗ್ಗೆ ಯಾರು ಬೇಕಾದ್ರೂ, ಏನಾದ್ರು ಪ್ರಚಾರ ಮಾಡ್ಲಿ. ನಮ್ಮದು ಕಾಂಗ್ರೆಸ್ ಪಕ್ಷ, ಭಯೋತ್ಪಾದನೆಯನ್ನು ವಿರೋಧಿಸುತ್ತಾ ಬಂದಿರುವ ಪಕ್ಷ. ಅಧಿಕಾರದಲ್ಲಿ ಇದ್ದಾಗೆಲ್ಲಾ ದೇಶದಲ್ಲಿ ಭಯೋತ್ಪಾದನೆ ದಮನ ಮಾಡಿದ್ದೇವೆ. ಭಯೋತ್ಪಾದನೆ ನಿಯಂತ್ರಿಸಲಾಗದ ಸರ್ಕಾರ ವಜಾ ಮಾಡಿದ್ದೇವೆ. ಮಂಗಳೂರು ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದೀವಿ ಎಂದರು.
ಕಂದಾಯ ಸಚಿವ ಆರ್. ಅಶೋಕ್ ನನಗೆ ಅಮಾಯಕನ ಅವಾರ್ಡ್ ಕೊಡುವುದಾಗಿ ಹೇಳಿದ್ದಾರೆ. ಅಮಾಯಕರ ಅವಾರ್ಡ್ ತೆಗೆದುಕೊಳ್ಳಲು ನಾನು ಸಿದ್ಧನಿದ್ದೇನೆ. ಅಶೋಕ್ ಡೇಟ್, ಟೈಮ್ ಫಿಕ್ಸ್ ಮಾಡಲಿ ಎಂದು ಡಿಕೆಶಿ ಸವಾಲು ಹಾಕಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

