ರಾಯಚೂರು: ಇತ್ತೀಚಿಗೆ ಹಲವು ಕಾರಣಕ್ಕಾಗಿ ಸುದ್ದಿಯಾಗಿದ್ದ ಸಿರಿವಾರ ಪೊಲೀಸ್ ಠಾಣೆ ಪಿಎಸ್‌ಐ ಗೀತಾಂಜಲಿ ಶಿಂಧೆ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಕೆಲ ದಿನಗಳ ಹಿಂದೆ ಯುವಕನೊಬ್ಬ ಪಿಎಸ್‌ಐ ಗೀತಾಂಜಲಿ ವಿರುದ್ಧ ಆರೋಪ ಮಾಡಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ. ಅನಗತ್ಯವಾಗಿ ಠಾಣೆಗೆ ಕರೆಸಿ ಕಿರುಕುಳ ನೀಡುತ್ತಿದ್ದಾರೆ. ಪಿಎಸ್‌ಐ ಗೀತಾಂಜಲಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ. ಅಲ್ಲದೇ ಸಾರ್ವಜನಿಕರು ಕೂಡ ಗೀತಾಂಜಲಿ ವಿರುದ್ಧ ಹಲವು ಆರೋಪ ಮಾಡಿ ದೂರು ನೀಡಿದ್ದರು.
ಇದೀಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ, ಗೀತಾಂಜಲಿ ಶಿಂಧೆ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

