Breaking News

ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುತ್ತಿದ್ದ ಕಾರ್ಯಕರ್ತರನ್ನು ತಡೆದ ಖಾಕಿಪಡೆ


ಬೆಳಗಾವಿ: ಮಹಾರಾಷ್ಟ್ರದಿಂದ ನಗರಕ್ಕೆ ಬರುತ್ತಿದ್ದ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಬಳಿ ಜಿಲ್ಲಾ ಪೊಲೀಸರು  ತಡೆದಿದ್ದಾರೆ.

ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಬೆಳಗಾವಿಯಲ್ಲಿ ಎಂಇಎಸ್ ಆಯೋಜಿಸಲು ಮುಂದಾಗಿದ್ದ ಮಹಾಮೇಳಾವದಲ್ಲಿ ಭಾಗವಹಿಸಲು ಕಾರ್ಯಕರ್ತರು ಬರುತ್ತಿದ್ದರು. ಆದರೆ, ಜಿಲ್ಲಾಡಳಿತ ಮಹಾಮೇಳಾವ್ ನಡೆಸಲು ಅನುಮತಿ ನಿರಾಕರಿಸಿದೆ. ಪೊಲೀಸರ ಎಚ್ಚರಿಕೆ ಹಿನ್ನೆಲೆಯಲ್ಲಿ ಎಂಇಎಸ್ ಕಾರ್ಯಕರ್ತರು ತಾವೇ ವೇದಿಕೆ ತೆರವುಗೊಳಿಸಿದ್ದಾರೆ‌.ಜಿಲ್ಲೆಯ ಗಡಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *