Breaking News

ಸರಕಾರಿ ಬಸ್ ಡಿಕ್ಕಿ  : 3 ವಿದ್ಯಾರ್ಥಿಗಳು ಸಾವು


ಬಳ್ಳಾರಿ : ಕಷ್ಟಗಳ ನಡುವೆ ಓದಿ ಮುಂದೆ ಬರಬೇಕು ಎಂದು ಆಸೆ ಹೊತ್ತಿದ್ದ ಮೂವರು ಹಾಸ್ಟೇಲ್ ವಿದ್ಯಾರ್ಥಿಗಳು ಸರಕಾರಿ ಬಸ್ ಡಿಕ್ಕಿ  ಹೊಡೆದು ಮೃತಪಟ್ಟ ಘಟನೆ ಬಳ್ಳಾರಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಎಮ್ಮಿಗನೂರಿನ ಕನಕರಾಜು(19), ಮುರುಡಿ ಗ್ರಾಮದ ಶಂಕರ(18), ಸಂಡೂರು ತಾಲೂಕಿನ ನಾಗೇನಹಳ್ಳಿಯ ಹೊನ್ನೂರ(22) ಮೃತಪಟ್ಟ ವಿದ್ಯಾರ್ಥಿಗಳು.ಹಾಸ್ಟೇಲ್ ನಲ್ಲಿ ಓದುತ್ತಿದ್ದ ಎಸ್ಟಿ/ಎಸ್ಟಿ ವಿದ್ಯಾರ್ಥಿಗಳು ಮನೆಯಲ್ಲಿ ಕಷ್ಟ ಎಂಬ ಕಾರಣಕ್ಕೆ ಪಾರ್ಟ್ ಟೈಂ ಕೆಲಸ ಮಾಡಿಕೊಂಡು ವಿದ್ಯಾಭ್ಯಾಸ ಮುಂದುವರಿಸಿದ್ದರು.

ಕ್ಯಾಟರಿಂಗ್ ಕೆಲಸ ಮುಗಿಸಿಕೊಂಡು ಹಾಸ್ಟೇಲ್ ಗೆ ಹಿಂತಿರುತ್ತಿದ್ದಾಗ ಹಲಕುಂದಿ ಬಳಿ ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *