Breaking News

ಭೈರಿದೇವರಕೊಪ್ಪ ದರ್ಗಾ ಕಾರ್ಯಾಚರಣೆ ಹೈ ಅಲರ್ಟ್; ಸೂಕ್ತ ಪೋಲಿಸ್ ಬಂದೋಬಸ್ತ್ ನಿಯೋಜನೆ

ಹುಬ್ಬಳ್ಳಿ: ರಸ್ತೆ ಅಗಲಿಕರಣದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯ ಭೈರಿದೇವರಕೊಪ್ಪದಲ್ಲಿರುವ ದರ್ಗಾದ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

ಹಜರತ್ ಸೈಯದ್ ಮೆಹಮೂದ್ ಶಾ ಖಾದ್ರಿ ದರ್ಗಾದ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿದ್ದು, ದರ್ಗಾದ ಆಡಳಿತ ಮಂಡಳಿ ನೇತೃತ್ವದಲ್ಲಿ ಇಂದು ತಡರಾತ್ರಿ ಮಹತ್ವದ ಸಭೆ ನಡೆಯಲಿದ್ದು, ಎಲ್ಲೆಡೆಯೂ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

ಈಗಾಗಲೇ ದರ್ಗಾದ ಆಡಳಿತ ಮಂಡಳಿಯು ಸಿಎಂ ಬಸವರಾಜ ಬೊಮ್ಮಾಯಿಯವರ ಭೇಟಿಗೆ ತೆರಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ದರ್ಗಾದ ಕಾರ್ಯಾಚರಣೆ ಬಗ್ಗೆ ಸಭೆಯ ಬಳಿಕವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Share News

About BigTv News

ಎ.ಐ.ಎಮ್.ಎಸ್.ಎಸ್‌ನಿಂದ ಮನವಿ

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *