Breaking News

ಸ್ಮಶಾನದ ಬಾವಿಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆ

ವಿಜಯಪುರ: ವಿಜಯಪುರ ನಗರದ ದೇವಗಿರಿ ಸ್ಮಶಾನದ ಬಾವಿಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಸ್ಮಶಾನದ ಬಾವಿಯಲ್ಲಿನ ಮೋಟರ್ ಸ್ಟಾರ್ಟ್ ಮಾಡಲು ಹೋದಾಗ ಶಿಶುವಿನ ಶವ ಪತ್ತೆಯಾಗಿದ್ದು, ಪಾಪಿಗಳು ಆಗತಾನೆ ಜನಿಸಿದ ನವಜಾತ ಹೆಣ್ಣು ಶಿಶುವನ್ನು ಬಾವಿಯಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಹೆಣ್ಣು ಮಗುವಾಗಿದೆ ಎಂಬ ಕಾರಣಕ್ಕೆ ಬಾವಿಯಲ್ಲಿ ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಯಾರು ಎಸೆದು ಹೋಗಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಆದರ್ಶ ನಗರ ಪಿಎಸ್‌ಐ ಯತೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *