Breaking News

ಕಾಮಗಾರಿ ಮುಗಿದಿದ್ದರೂ ಉದ್ದೇಶಪೂರ್ವಕವಾಗಿಯೇ ದರ್ಗಾ ತೆರವು: ಹಿಂಡಸಗೇರಿ

ಬಿ.ಆರ್.ಟಿ.ಎಸ್ ಕಾಮಗಾರಿಗೆ ದರ್ಗಾ ಯಾವುದೇ ರೀತಿಯಲ್ಲಿ ತೊಂದರೆ ಮಾಡಿದ್ದಿಲ್ಲ. ಅಲ್ಲದೇ ಈಗಾಗಲೇ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಹೀಗಿದ್ದರೂ ಕೂಡ ಸರ್ಕಾರ ಅಂಧ ದರ್ಬಾರ ಮೂಲಕ ಬೇಕಾಬಿಟ್ಟಿಯಾಗಿ ದರ್ಗಾವನ್ನು ತೆರವು ಮಾಡಲು ನಿರ್ಧಾರ ಮಾಡಿರುವುದು ನಿಜಕ್ಕೂ ಖಂಡನೀಯವಾಗಿದೆ ಎಂದು ಮಾಜಿ ಸಚಿವ ಎ.ಎಂ.ಹಿಂಡಸಗೇರಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಭೈರಿದೇವರಕೊಪ್ಪದ ದರ್ಗಾ ತೆರವು ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿದ ವೇಳೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನೂರಾರು ವರ್ಷದ ಐತಿಹಾಸಿಕ ಪರಂಪರೆಗೆ ಬಿಜೆಪಿ ಸರ್ಕಾರದ ನಿರ್ಧಾರ ದಕ್ಕೆ ಉಂಟು ಮಾಡಿದೆ. ಬಿ.ಆರ್.ಟಿ.ಎಸ್ ಕಾಮಗಾರಿ ಪೂರ್ಣಗೊಂಡಿದ್ದರೂ ಕೂಡ ಉದ್ದೇಶಪೂರ್ವಕವಾಗಿಯೇ ದರ್ಗಾವನ್ನು ತೆರವು ಮಾಡಲು ಷಡ್ಯಂತ್ರ ರೂಪಿಸಲಾಗಿದೆ. ಇದು ನಿಜಕ್ಕೂ ಖಂಡನೀಯವಾಗಿದೆ ಈ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಸೌಹಾರ್ದತೆಗೆ ಸಾಕ್ಷಿಯಾಗಿರುವ ನೆಲ. ಇಂತಹ ಪುಣ್ಯ ಭೂಮಿಯಲ್ಲಿ ಬಿಜೆಪಿಯವರು ತಮ್ಮ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಇಂತಹದೊಂದು ನಿರ್ಧಾರ ಕೈಗೊಂಡಿರುವುದು ಸರಿಯಲ್ಲ‌. ಒಂದು ಧರ್ಮದ ಧಾರ್ಮಿಕ ಭಾವನೆಗೆ ದಕ್ಕೆ ಮಾಡುವುದನ್ನು ಬಿಜೆಪಿ ಸರ್ಕಾರ ಕೈ ಬಿಡಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *