Breaking News

ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಜನರ ನಿರ್ಲಕ್ಷ್ಯ: ಖಾಕಿಗೆ ದೊಡ್ಡ ಸವಾಲು

ಹುಬ್ಬಳ್ಳಿ : ಸಾಕಷ್ಟು ಕುತೂಹಲಕ್ಕೆ ಕಾರಣವಾಗಿರುವ ವಾಣಿಜ್ಯನಗರಿ ಹುಬ್ಬಳ್ಳಿಯ ಭೈರಿದೇವರಕೊಪ್ಪದ ದರ್ಗಾ ತೆರವು ಕಾರ್ಯಾಚರಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಐಪಿಸಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹೀಗಿದ್ದರೂ ಕೂಡ ಜನರು ಮಾತ್ರ ನಿರ್ಲಕ್ಷ್ಯ ತೋರುತ್ತಿದ್ದಾರೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಕಮೀಷನರೇಟ್ ನಿಂದ ನಿಷೇಧಾಜ್ಞೆ ಜಾರಿ ಮಾಡಿದ್ದರೂ ಕೂಡ ಜನರು ಗುಂಪು ಕಟ್ಟಿಕೊಂಡು ಓಡಾಡುತ್ತಿದ್ದು, ಪೊಲೀಸ್ ಸಿಬ್ಬಂದಿಗಳಿಗೆ ಜನರನ್ನು ಚದರಿಸುವುದೇ ದೊಡ್ಡ ಸವಾಲಾಗಿದೆ. ಒಟ್ಟಿನಲ್ಲಿ ಪೊಲೀಸ್ ಕಮೀಷನರೇಟ್ ನ ನಿರ್ಧಾರಕ್ಕೆ ಕವಡೆ ಕಾಸಿನ ಕಿಮ್ಮತ್ತೂ ಇಲ್ಲದಂತಾಗಿದ್ದು, ಜನರಿಗೆ ಕಾನೂನಿನ ಬಗ್ಗೆ ಪೊಲೀಸ್ ಇಲಾಖೆಯ ಬಗ್ಗೆ ಮತ್ತಷ್ಟು ಜ್ಞಾನದ ಅವಶ್ಯಕತೆ ಇದೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *