ಬೆಳಗಾವಿ: ಕೋವಿಡ್ ಹೆಚ್ಚುತ್ತಿರುವ ಬಗ್ಗೆ ರಾಜ್ಯ ಗಂಭೀರವಾಗಿ ತೆಗೆದುಕೊಂಡಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿನ ಬೆಳವಣಿಗೆಗಳು, ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಗಳು, ಯಾವ ರೀತಿ ಪರೀಕ್ಷೆಗಳು ಹೆಚ್ಚಿಸಬೇಕು. ಜಿನೊಮೆಟಿಕ್ ಪರೀಕ್ಷೆ ಮಾಡುವ ಬಗ್ಗೆ, ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸುದೀರ್ಘವಾದ ಕಾರ್ಯಕ್ರಮ ರೂಪಿಸಲು ಗುರುವಾರ ಸಭೆಯನ್ನು ಕರೆಯಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹೀಗಾಗಿ ಇಂದು ಸಿಎಂ ಕರೆದಿರುವಂತ ಕೋವಿಡ್ ಕಂಟ್ರೋಲ್ ಸಭೆ ಮಹತ್ವ ಮೂಡಿಸಿದ್ದು, ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ ನಿಯಮ ಜಾರಿಯಾಗಲಿದೆಯಾ ಎನ್ನುವ ಕೂತೂಹಲ ಮೂಡಿಸಿದೆ.
ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಈ ಬಾರಿ ರಾಷ್ಟ್ರೀಯ ಯುವಜನೋತ್ಸವದ ಆತಿಥ್ವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಸಲಾಗಿದ್ದು, ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.
ಎಲ್ಲ ರಾಜ್ಯಗಳಿಂದ ಸುಮಾರು 7.5 ಸಾವಿರ ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದು, ವಸತಿ ಸೌಕರ್ಯ ಮತ್ತು ವೇದಿಕೆಗಳನ್ನು ಸಿದ್ಧ ಪಡಿಸಲು ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯಕ್ಕೆ ಈ ಅವಕಾಶ ದೊರೆತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಯುವ ಸಬಲೀಕರಣ ಸಚಿವ ಅನುರಾಗ್ ಠಾಕೂರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

