Breaking News

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ಎಸ್. ಹೆಗಡೆ ಕುಂದರ್ಗಿ ನಿಧನ

ಯಲ್ಲಾಪುರ: ತಾಲ್ಲೂಕಿನ ಹಿರಿಯ ಸಾಮಾಜಿಕ, ಧಾರ್ಮಿಕ, ಸಹಕಾರಿ, ರಾಜಕೀಯ ಧುರೀಣ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ಎಸ್. ಹೆಗಡೆ ಕುಂದರ್ಗಿ (90) ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾದರು. ಅವರನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಳಿಕ ಮನೆಗೆ ಕರೆದುಕೊಂಡು ಬರಲಾಗಿತ್ತು.

ಅವರಿಗೆ ಒಬ್ಬ ಪುತ್ರ, ಇಬ್ಬರು ಪುತ್ರಿಯರಿದ್ದಾರೆ. ತಾಲ್ಲೂಕಿನ ಕುಂದರ್ಗಿಯವರಾದ ಇವರು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದರು. ಕುಂದರ್ಗಿಯ ಅಭಿವೃದ್ಧಿಗೆ ಮಹತ್ವದ ಪಾತ್ರ ವಹಿಸಿದ್ದರು.

ವಿವಿಧ ಸಂಘ ಸಂಸ್ಥೆಗಳಿಂದ ಪ್ರಶಸ್ತಿ, ಗೌರವಗಳಿಗೆ ಭಾಜನರಾಗಿದ್ದರು. 5- 6 ದಶಕಗಳ ಸಮಾಜಸೇವೆಯನ್ನು ಗುರುತಿಸಿ 2020ರಲ್ಲಿ ಕರ್ನಾಟಕ ಸರ್ಕಾರ ಸಮಾಜ ಸೇವೆ ವಿಭಾಗದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿತ್ತು.

Share News

About BigTv News

Check Also

ವಿಜಯನಗರ : ಕ್ಷುಲ್ಲಕ ಕಾರಣಕ್ಕೆ ಗಲಾಟೆ – ರುಬ್ಬುಗುಂಡಿನ ಕಲ್ಲಿನಿಂದ ಹೊಡೆದು ಯುವಕನ ಭೀಕರ ಕೊಲೆ

ಹೊಸಪೇಟೆ: ನಗರದ ಸಿದ್ದಲಿಂಗಪ್ಪ ಚೌಕಿಯ 4ನೇ ಕ್ರಾಸ್‌ನ ಎಲ್ಲಮ್ಮ ದೇವಸ್ಥಾನದ ಬಳಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ …

Leave a Reply

Your email address will not be published. Required fields are marked *