Breaking News

ಭಾರತದಲ್ಲಿ ‌BF.7 ರೂಪಾಂತರದ ಕನಿಷ್ಠ ಮೂರು ಪ್ರಕರಣಗಳು ವರದಿ : ಕೇಜ್ರಿವಾಲ್


ನವದೆಹಲಿ: ಭಾರತದಲ್ಲಿ ಒಮಿಕ್ರಾನ್ ಸಬ್‌ವೇರಿಯಂಟ್
BF.7 ರೂಪಾಂತರದ ಕನಿಷ್ಠ ಮೂರು ಪ್ರಕರಣಗಳು ವರದಿ
ಯಾದ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ಫುಲ್ ಅಲರ್ಟ್ ಆಗಿದೆ. ಹೊಸ ಉಪತಳಿ ಪತ್ತೆ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ ಉನ್ನತ ಅಧಿಕಾರಿಗಳೊಂದಿಗೆ ತುರ್ತು ಕೋವಿಡ್ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ.

ಚೀನಾದಲ್ಲಿ ಸೃಷ್ಟಿಯಾಗಿರುವ ಕೋವಿಡ್-19 ಭೀತಿಯ ಹಿಂದೆಯೇ ಭಾರತವು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ವಹಿಸುತ್ತಿದೆ. ಈ ಸಂಬಂಧ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಿದ್ದು ಆಗಿದೆ.

ದೇಶದಲ್ಲಿ BF.7 ಉಪತಳಿಯ ಮೊದಲ ಪ್ರಕರಣವನ್ನು ಅಕ್ಟೋಬರ್‌ನಲ್ಲಿ ಗುಜರಾತ್ ಬಯೋಟೆಕ್ನಾಲಜಿ ರಿಸರ್ಚ್ ಸೆಂಟರ್ ಪತ್ತೆ ಮಾಡಿದೆ. ಇಲ್ಲಿಯವರೆಗೆ ಗುಜರಾತ್‌ನಲ್ಲಿ ಎರಡು ಪ್ರಕರಣಗಳು ವರದಿಯಾಗಿದ್ದು, ಒಡಿಶಾದಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.

Share News

About BigTv News

ಬಿ.ಶ್ರೀರಾಮುಲು

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *