Breaking News

2,000 ಚಾಲಕರನ್ನು ನೇಮಕ ಮಾಡಿಕೊಳ್ಳಲಾಗುವುದು: ಬಿ.ಶ್ರೀರಾಮುಲು



ಬೆಳಗಾವಿ: ರಾಜ್ಯದ ವಿವಿಧ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರವೇ 2,000 ಚಾಲಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಸಿದ್ದು ಸವದಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಚಾಲಕರಿಗೆ ಈವರೆಗೆ ತರಬೇತಿ ಅವಧಿಯಲ್ಲಿ ₹10 ಸಾವಿರ ನೀಡಲಾಗುತ್ತಿತ್ತು.ಆ ಮೊತ್ತವನ್ನು ₹20 ಸಾವಿರಕ್ಕೆ ಹೆಚ್ಚಿಸಲಾ
ಗುವುದು ಎಂದು ಅವರು ತಿಳಿಸಿದರು.

ಕೋವಿಡ್ ಸಂದರ್ಭದಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಸಾರಿಗೆ ಸಂಸ್ಥೆಗಳ ಬಸ್ ಸಂಚಾರವನ್ನು ನಿಲ್ಲಿಸಲಾಗಿತ್ತು. ಹಲವು ಕಡೆಗಳಲ್ಲಿ ಪುನಃ ಸಂಚಾರ ಆರಂಭಿಸಲಾಗಿದೆ. ಅಲ್ಲದೆ, ಕೆಲವು ಕಡೆಗಳಲ್ಲಿ ರಸ್ತೆಗಳು ಸರಿ ಇಲ್ಲದ ಕಾರಣ ಬಸ್‌ಗಳು ಸಂಚರಿಸುತ್ತಿಲ್ಲ. ಚಾಲಕರು ಮತ್ತು ಕಂಡಕ್ಟರ್‌ಗಳ ಕೊರತೆಯೂ ಇದೆ ಎಂದು ಹೇಳಿದರು. ಸಚಿವರ ಈ ಉತ್ತರದ ಬಗ್ಗೆ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *