Breaking News

ಕೋವಿಡ್ ನೆಪವಿಟ್ಟುಕೊಂಡು ಚುನಾವಣೆ ಮುಂದೂಡುವ ಯತ್ನ  : ಡಿಕೆಶಿ

ಬೆಳಗಾವಿ : ಕೋವಿಡ್ ನೆಪವಿಟ್ಟುಕೊಂಡು ಚುನಾವಣೆ ಮುಂದೂಡುವ ಯತ್ನ ವನ್ನು ಸರ್ಕಾರ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಬಳಿ ಚರ್ಚೆ ನಡೆಸಲಾಗಿದೆ.
ಸಂಪುಟದಲ್ಲೂ ಚರ್ಚೆ ನಡೆಯುತ್ತಿದೆ. ದೆಹಲಿಯ ಪ್ರಧಾನಿ ಕಚೇರಿಯಿಂದ ದೂರವಾಣಿ ಕರೆ ಬಂದಿದೆ ಎಂಬ ಮಾಹಿತಿ ಇದೆ. ಇದೆಲ್ಲವೂ ಚುನಾವಣೆ ಮುಂದೂಡುವ ಹುನ್ನಾರ. ಅವರು ಯಾವಾಗಲಾದರೂ ಚುನಾವಣೆ ಮಾಡಲಿ ನಮ್ಮ ಪಕ್ಷ ಸಿದ್ಧವಿದೆ ಎಂದರು.

ಈ ಹಿಂದೆ ನಾವು ಮೇಕೆದಾಟು ಯಾತ್ರೆ ಮಾಡಿದಾಗ ಕೋವಿಡ್ ನೆಪದಲ್ಲಿ ನಮ್ಮ ವಿರುದ್ಧ ನಾಲ್ಕೈದು ಪ್ರಕರಣ ದಾಖಲಿಸಿದರು. ಈಗ ರಾಹುಲ್‍ಗಾಂಧಿ ಯಾತ್ರೆಗೆ ಜನ ಸೇರುವುದನ್ನು ತಪ್ಪಿಸಲು ಪ್ರಕರಣ ದಾಖಲಿಸುವ ಹುನ್ನಾರ ನಡೆದಿದೆ. ಕೋವಿಡ್ ವಿಷಯದಲ್ಲಿ ವೈಜ್ಞಾನಿಕವಾಗಿ ಯಾವುದೇ ಮಾಹಿತಿ ಇಲ್ಲ. ಆದರೆ ಪ್ರತಿಪಕ್ಷಗಳ ಜನಪ್ರಿಯ ಕಾರ್ಯಕ್ರಮಗಳನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *