ಬೆಳಗಾವಿ : ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ನಿನ್ನೆ ವಿಧಾನಪರಿಷತ್ ನಲ್ಲಿ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಈಗಾಗಲೇ ಗೌರವ ಧನ ಹೆಚ್ಚಳ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ರಾಜ್ಯ ಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯ್ತಿಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಳ ಮಾಡಿ, ಗುಡ್ ನ್ಯೂಸ್ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

