Breaking News

ಮದುವೆಯಾದ 7 ತಿಂಗಳಿಗೆ ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ


ಹಾಸನ : ಮದುವೆಯಾದ 7 ತಿಂಗಳಿಗೆ ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ವರದಿಯಾಗಿದೆ.

ಮೃತ ಯುವತಿಯನ್ನು ರೋಹಿಣಿ (23) ಎಂದು ಗುರುತಿಸಲಾಗಿದೆ.7 ತಿಂಗಳ ಹಿಂದೆ ಸುಮಂತ್ ಎಂಬಾತನ ಜೊತೆ ರೋಹಿಣಿ ಮದುವೆಯಾಗಿತ್ತು. 3 ತಿಂಗಳ ಗರ್ಭಿಣಿಯಾಗಿದ್ದ ಈಕೆ ಕೆರೆ ಸಮೀಪ ಬಂದು ಅಲ್ಲಿಯೇ ಬಟ್ಟೆ ಒಗೆಯುತ್ತಿದ್ದ ಮಹಿಳೆಯರ ಜೊತೆ ಕೆಲಕಾಲ ಮಾತನಾಡಿ, ಸಂಬಂಧಿಕರ ಮನೆಗೆ ಬಂದಿದ್ದೀನಿ ಎಂದು ಮಹಿಳೆಯರಿಗೆ ಹೇಳಿದ್ದಳು. ಇತ್ತ ಮಹಿಳೆಯರು ಬಟ್ಟೆ ಒಗೆದು ಹಿಂತಿರುಗುತ್ತಿದ್ದಂತೆಯೇ ರೋಹಿಣಿ ಕೆರೆಗೆ ಹಾರಿ ದುರಂತ ಅಂತ್ಯ ಕಂಡಿದ್ದಾಳೆ ಸಾವಿಗೂ ಮುನ್ನ ಕೆರೆ ದಡದಲ್ಲಿ 1760 ರೂಪಾಯಿ, ಮೊಬೈಲ್ ಹಾಗೂ ಚಪ್ಪಲಿ ಬಿಟ್ಟು ಕೆರೆಗೆ ಹಾರಿದ್ದಾಳೆ ಎನ್ನಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *