Breaking News

ರೈತರಿಗೆ ಸಿಹಿ ಸುದ್ದಿ ನೀಡಿದ ಬಿ.ಸಿ. ಪಾಟೀಲ್

ಬೆಳಗಾವಿ: ಕೃಷಿ ಯಂತ್ರಧಾರೆ ಯೋಜನೆಯನ್ನು ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ ನಡಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಮುನಿರಾಜುಗೌಡ ಪಿ.ಎಂ. ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಲವೆಡೆ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡದೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ.2015-16ನೇ ಸಾಲಿನಲ್ಲಿ ಸ್ಥಾಪಿಸಿರುವ ಕೆಲವು ಕೃಷಿ ಯಂತ್ರಧಾರೆ ಕೇಂದ್ರಗಳ ಆರು ವರ್ಷಗಳ ಒಡಂಬಡಿಕೆ ಅವಧಿಯು ಮುಕ್ತಾಯವಾಗಿದೆ ಎಂದರು.

ಸಂಬಂಧಪಟ್ಟ ಸೇವಾ ದರ ಸಂಸ್ಥೆಗಳು ಸದರಿ ಕೇಂದ್ರಗಳನ್ನು ಮುಂದುವರೆಸಲು ಇಚ್ಚೆಪಡದ ಹಿನ್ನಲೆಯಲ್ಲಿ ಅಂತಹ ಕೇಂದ್ರಗಳನ್ನು ಇತರೆ ಆಸಕ್ತಿಯುಳ್ಳ ಸೇವಾ ದರ ಸಂಸ್ಥೆಗಳಿಗೆ ಅಥವಾ ಆದ್ಯತೆ ಮೇರೆಗೆ ರೈತ ಉತ್ಪಾದಕ ಸಂಸ್ಥೆಗಳಿಗೆ ಹಸ್ತಾಂತರಿಸಲು ಸರ್ಕಾರಿ ಆದೇಶವನ್ನು ನೀಡಲಾಗಿದ್ದು, ಅದರನ್ವಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕೃಷಿ ಸಚಿವರು ಉತ್ತರಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *