Breaking News

ಬಿಎಂಟಿಸಿ ,ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಇಂದಿನಿಂದ ಮಾಸ್ಕ್ ಕಡ್ಡಾಯ


ಬೆಂಗಳೂರು: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚಾಗಿದ್ದು, ಬೆಂಗಳೂರಿನಲ್ಲಿ ಕೊರೊನಾ ಆತಂಕ ಶುರುವಾಗಿದೆ.ಹೀಗಾಗಿ ಬಿಎಂಟಿಸಿ ,ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಇಂದಿನಿಂದ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ ಕೊರೊನಾ ಭೀತಿ ಹೆಚ್ಚಳವಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಪ್ರಯಾಣಿಕರು, ಚಾಲಕ, ಕಂಡಾಕ್ಟರ್ ಮಾಸ್ಕ್ ಬಳಸುವುದು ಕಡ್ಡಾಯ ಮಾಡಿ ಇಲಾಖೆ ಆದೇಶ ಹೊರಡಿಸಿದೆ.

ಬಿಎಂಟಿಸಿ ಬಸ್​ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮಾಸ್ಕ್​ ಕಡ್ಡಾಯ ಮಾಡಲಾಗಿದೆ. ಕೊರೋನಾ ರೂಪಾಂತರಿ ತಳಿ BF.7 ಆತಂಕ ಹಿನ್ನೆಲೆಯಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್​ಗಳ ಕಂಡಕ್ಟರ್, ಡ್ರೈವರ್, ಪ್ರಯಾಣಿಕರಿಗೂ ಮಾಸ್ಕ್ ಕಡ್ಡಾಯ ಮಾಡಿದೆ. ಈ ಸಂಬಂಧ ಶೀಘ್ರವೇ ಬಿಎಂಟಿಸಿ ಗೈಡ್​ಲೈನ್ಸ್​​​​​ ಬಿಡುಗಡೆ ಮಾಡಲಿದೆ. ಇಂದಿನಿಂದ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್​ಗಳಲ್ಲಿ ಪ್ರಯಾಣಿಸಬೇಕಾದರೆ ಮಾಸ್ಕ್​ ಕಡ್ಡಾಯವಾಗಿ ಧರಿಸಬೇಕು. ಒಂದು ವೇಳೆ ಮಾಸ್ಕ್​ ಹಾಕಿಲ್ಲ ಅಂದರೆ ಬಸ್‌ ಗೆ ಹೋಗಲು ಅವಕಾಶ ನೀಡಲ್ಲ ಎಂದು ಸಾರಿಗೆ ಇಲಾಖೆ ಸೂಚನೆ ನೀಡಿದೆ.

Share News

About BigTv News

ಬಿ.ಸಿ. ಪಾಟೀಲ್

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *