ಸಾಲ ಮಂಜೂರಾತಿಯಲ್ಲಿ ಅಕ್ರಮ, ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿ ಬ್ಯಾಂಕ್ನ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಚಂದಾ ಕೊಚ್ಚರ್ ಮತ್ತು ಪತಿ ದೀಪಕ್ ಕೊಚ್ಚರ್ ಅವರನ್ನು ಸಿಬಿಐ ಬಂಧಿಸಿದೆ.
ಐಸಿಐಸಿಐ ಬ್ಯಾಂಕ್‌ಗೆ ವಂಚನೆ ಮಾಡುವ ದೃಷ್ಟಿಯಿಂದ ಇತರರ ಜೊತೆ ಸೇರಿಕೊಂಡು ಖಾಸಗಿ ಕಂಪನಿಗಳಿಗೆ ಸಾಲ ಮಂಜೂರಾತಿ ಮಾಡಿದ್ದಾರೆ ಎನ್ನುವ ಆರೋಪ ಚಂದಾ ಕೊಚ್ಚರ್ ದಂಪತಿ ಮೇಲಿದೆ.
2012 ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ಸಾಲ ಪಡೆದು, ಕೆಲವು ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರು ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ತನಿಖೆ ಪ್ರಾರಂಭವಾದ ನಂತರ 2018ರಲ್ಲಿ ಚಂದಾ ತಮ್ಮ ಸ್ಥಾನದಿಂದ ಕೆಳಗಿಳಿಯಬೇಕಾಯಿತು.
ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಚಂದಾ ಕೊಚ್ಚರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

