ಧಾರವಾಡ : ಚಿಗರಿ ಬಸ್ ಹಾಗೂ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡದ ಮಾಡರ್ನ್ ಹಾಲ್ ಮುಂಭಾಗದಲ್ಲಿ ಸಂಭವಿಸಿದೆ.

ಅಪಘಾತದಲ್ಲಿ ಇಬ್ಬರೂ ಬೈಕ್ ಸವಾರರಿಗೆ ಗಂಭೀರವಾದ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗಿದೆ. ಗಾಯಗೊಂಡವರ ಹೆಸರು ವಿಳಾಸ ಪತ್ತೆಯಾಗಿಲ್ಲ.
ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ, ಅವರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

