Breaking News

ಶಿಕ್ಷಕರಿಗೆ ಸಿಹಿ ಸುದ್ದಿ



ಬೆಂಗಳೂರು: ಜನವರಿಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಶೀಘ್ರವೇ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.

ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆಯ ತಿದ್ದುಪಡಿಯನ್ನು ಅಧಿಕೃತ ಗೆಜೆಟ್ ನಲ್ಲಿ ಪ್ರಕಟಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಸಮ್ಮತಿಸಿದ್ದಾರೆ. ಮುಂದಿನ ತಿಂಗಳು ಜನವರಿ ಅಂತ್ಯದೊಳಗೆ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಲಾಗಿದೆ.

ಶಿಕ್ಷಕರ ಸ್ನೇಹಿ ವರ್ಗಾವಣೆ ನಿಯಮ ರೂಪಿಸಿ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆಗೆ ತಿದ್ದುಪಡಿ ಕರಡು ಅಧಿಸೂಚನೆ ಹೊರಡಿಸಲಾಗಿದ್ದು, ಆಕ್ಷೇಪಣೆ ಸ್ವೀಕರಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗಿತ್ತು. ಈಗ ಜನವರಿ ಅಂತ್ಯದೊಳಗೆ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗ್ತಿದೆ ಎನ್ನಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *