Breaking News

ಇಂದಿನಿಂದ 3 ದಿನಗಳ ಕಾಲ ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಮಾಂಡೌಸ್ ಚಂಡಮಾರುತದಿಂದ ಕರ್ನಾಟಕದಾದ್ಯಂತ ಮಳೆಯ ಅಬ್ಬರ ಉಂಟಾಗಿತ್ತು.ನಾಲ್ಕೈದು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ  ಇದೀಗ ಮತ್ತೆ ಅಬ್ಬರಿಸತೊಡಗಿದ್ದಾನೆ. ಇಂದಿನಿಂದ 3 ದಿನಗಳ ಕಾಲ ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯಿದೆ.ಬೆಂಗಳೂರಿನಲ್ಲಿ ಭಾನುವಾರ ಕೂಡ ಇಡೀ ದಿನ ಮೋಡ ಕವಿದ ವಾತಾವರಣವಿತ್ತು. ಕೆಲವೆಡೆ ಸಂಜೆಯ ವೇಳೆಗೆ ತುಂತುರು ಮಳೆಯೂ ಸುರಿದಿತ್ತು. ಇಂದು ಕೂಡ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *