Breaking News

ಸಮುದಾಯ ಆರೋಗ್ಯ ಅಧಿಕಾರಿಗಳ ನೇಮಕಾತಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ: ನೀರಲಕೇರಿ

ಧಾರವಾಡ: ಸಮುದಾಯ ಆರೋಗ್ಯ ಅಧಿಕಾರಿಗಳ ನೇಮಕಾತಿ ಸಂದರ್ಭದಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿದೆ ಎಂದು ಕರ್ನಾಟಕ ಶುಷ್ರ್ರೂಷಕರ ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ, ಹಿರಿಯ ನ್ಯಾಯವಾದಿ ಪಿ.ಎಚ್.ನೀರಲಕೇರಿ ಆಪಾದಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಕಳೆದ ದಿ.೧೭ ರಿಂದ ಒಟ್ಟು ೧೦ ದಿನಗಳಲ್ಲಿ ತರಾತುರಿಯಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದರು.

ಆರೋಗ್ಯ ಇಲಾಖೆಯಲ್ಲಿ ಒಟ್ಟು ೧೦೪೮ ಸಮುದಾಯ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಡಿ.೧೭ ರಂದು ಅಧಿಸೂಚನೆ ಹೊರಡಿಸಿ ಮುಂದಿನ ೧೦ ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಸರಕಾರದ ನಿಯಮಗಳಲ್ಲಿನ ರೋಸ್ಟರ್ ಪಾಲನೆ. ವೆಬ್‌ಸೈಟ್‌ನಲ್ಲಿ ಅಳವಡಿಸುವುದು ಸೇರಿದಂತೆ ಇನ್ನಿತರ ನಿಯಮಗಳನ್ನು ಪಾಲಿಸಿಲ್ಲ ಎಂ.ದು ಆರೋಪಿಸಿದರು.

ಈ ನೇಮಕಾತಿಯಲ್ಲಿ ಪಾರದರ್ಶಕತೆ ಕಂಡುಬರುತ್ತಿಲ್ಲ. ಅತಿ ಕಡಿಮೆ ಅವಧಿಯಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿರುವುದರಿಂದ ಅರ್ಹರಿಗೆ ಅನ್ಯಾಯ ವಾಗುವ ಸಾಧ್ಯತೆ ಹೆಚ್ಚಿದೆ.ಅಲ್ಲದೇ ಅವ್ಯವಹಾರ ನಡೆದಿರುವ ಶಂಕೆ ಇದೆ. ಆದ್ದರಿಂದ ಈ ನೇಮಕಾತಿಯನ್ನು ರದ್ದುಗೊಳಿಸಿ ನಿಯಮಾನುಸಾರ ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದು ಅವರು ಆಗ್ರಹಿಸಿದರು. ಕರ್ನಾಟಕ ಶುಷ್ರ್ರೂಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮೆಹಬೂಬ ನದಾಫ್, ವಿ.ಜಿ.ಕೊಂಗವಾಡ, ವಿಶ್ವನಾಥ ಸುದ್ದಿಗೋಷ್ಠಿಯಲ್ಲಿದ್ದರು.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *