Breaking News

ಸರ್ಕಾರದ ಮಾರ್ಗಸೂಚಿಯಂತೆ ಕೋವಿಡ್ ನಿಯಮಾವಳಿ- ಡಾ. ಶ್ರೀಧರ ದಂಡೆಪ್ಪನವರ

ಹುಬ್ಬಳ್ಳಿ : ಚೀನಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಇಲಾಖೆಯ ನೀಡಿದ ಮಾರ್ಗದರ್ಶನದಂತೆ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ಹು-ಧಾ ಮುಖ್ಯ ಆರೋಗ್ಯಧಿಕಾರಿ ಶ್ರೀಧರ್ ದಂಡೆಪ್ಪನವರ ಹೇಳಿದರು. ಐಎಲ್‌ಐ ಕೇಸ್‌ಗಳಿಗೆ ನಾವು ಮರು ಪರೀಕ್ಷೆಗೆ ಮುಂದಾಗಿದ್ದೇವೆ ಎಂದು ಅವರು ಹೇಳಿದರು.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೋವಿಡ್ ಬರುವ ಕೇಸ್‌ಗಳ ಕುರಿತು ಸರ್ವೆ ಮಾಡಲಾಗುತ್ತಿದೆ. ನಗರ ಪ್ರದೇಶದಲ್ಲಿ ವ್ಯಾಕ್ಸಿನೇಷನ್ ಗೋಸ್ಕರವಾಗಿ ವೇರಿಯಸ್ ಕ್ಯಾಂಪ್‌ಗಳನ್ನು ಆಯೋಜನೆ ಮಾಡುತ್ತಿದ್ದು, ವ್ಯಾಕ್ಸಿನೇಷನ್ ಶೇಕಡಾ ನೂರರಷ್ಟು ಪೂರೈಕೆ ತಲುಪಬೇಕು ಎಂಬ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದರು

ಕೊರೊನಾ ಹೊಸ ತಳಿ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಹಿಂದೆ ಎಚ್ಚರಿಕೆ ವಹಿಸಿದ್ದೇವು. ಆ ರೀತಿಯಾಗಿ ಸನ್ನದ್ಧರಾಗಿದ್ದೇವೆ. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮಾಸ್ಕ್ ಕಡ್ಡಾಯವಾಗಿ ಬಳಸಬೇಕು. ಕೋವಿಡ್ ವ್ಯಾಕ್ಸಿನೇಷನ್ ತಪ್ಪದೇ ಎಲ್ಲರೂ ಹಾಕಿಸಿಕೊಳ್ಳಬೇಕು. ಜಾಗೃತೆಯಿಂದ ಎಚ್ಚರ ವಹಿಸುವುದು ಆರೋಗ್ಯಕರ ಎಂದು ಸಲಹೆ ನೀಡಿದರು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *