Breaking News

ಉಕ‌ ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ

ಹುಬ್ಬಳ್ಳಿ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಆಗ್ರಹಿಸಿ ಹಾಗೂ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರದ ವಿರುದ್ಧ ಒಂದು ದಿನದ ಸಾಂಕೇತಿಕ ಧರಣಿಯನ್ನು ಉತ್ತರ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ನಗರದ ಮಿನಿ ವಿಧಾನಸೌಧ ಬಳಿ ಹಮ್ಮಿಕೊಳ್ಳಲಾಯಿತು.

ಇನ್ನೂ ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ನವ ನಿರ್ಮಾಣ ವೇದಿಕೆಯ ರಾಜ್ಯಾಧ್ಯಕ್ಷ ಈರಪ್ಪ ಎಮ್ಮಿ, ಉತ್ತರ ಕರ್ನಾಟಕದ ಭಾಗದಲ್ಲಿ ಮೊದಲಿನಿಂದಲೂ ಸರ್ಕಾರ ಮಹಾದಾಯಿ ವಿಷಯದಲ್ಲಿ ತಾರತಮ್ಯ ಮಾಡಿದೆ. ಅಲ್ಲದೆ ಶೈಕ್ಷಣಿಕ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಿರ್ಲಕ್ಷ್ಯ ವಹಿಸುವ ಮೂಲಕ ಉತ್ತರ ಕರ್ನಾಟಕದ ಜನತೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಬೇಕು. ಈ ಹಿನ್ನಲೆಯಲ್ಲಿ ಹೋರಾಟ ಹಮ್ಮಿಕೊಂಡಿದ್ದು ಉ.ಕ ಭಾಗಕ್ಕೆ ಹೆಚ್ಚಿನ ಸೌಲಭ್ಯವನ್ನು ಒದಗಿಸಬೇಕು ಎಂದು ಆಗ್ರಹಿಸಿದ ಅವರು, ನಮ್ಮ ಹೋರಾಟ ಸಮಿತಿಯ ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವ ಮೂಲಕ ಪ್ರತ್ಯೇಕ ಉತ್ತರ ಕಲ್ಯಾಣ ಕರ್ನಾಟಕಕ್ಕೆ ನಾವು ಮುಂದಾಗುತ್ತೇವೆ ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ರೈತ ಹೋರಾಟ ಸಮಿತಿ, ಕರ್ನಾಟಕ ನವ ನಿರ್ಮಾಣ ವೇದಿಕೆ, ಕರ್ನಾಟಕ ಪ್ರವೀಣ ಶೆಟ್ಟಿ ಬಣ, ಅನೇಕ ಸಂಘ ಸಂಸ್ಥೆಗಳು ಈ ಹೋರಾಟಕ್ಕೆ ಬೆಂಬಲ ನೀಡಲಿವೆ ಎಂದರು.
ಇನ್ನೂ ಈ ಸಂದರ್ಭದಲ್ಲಿ ಧಿಕ್ಕಾರ ಕೂಗಿದ ಧರಣಿ ನಿರತರು, ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದ ಸರ್ಕಾರಕ್ಕೆ ಧಿಕ್ಕಾರ, ಮಹಾದಾಯಿ ವಿಷಯದಲ್ಲಿ ತಾರತಮ್ಯವೆಸಗಿದ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *