Breaking News

ಬೆಂಕಿ ಅವಘಡ : 4 ಕಾರ್ಮಿಕರು ಸಾವು



ವಿಶಾಖಪಟ್ಟಣಂ: ಪರವಾಡ ಲಾರಸ್ ಫಾರ್ಮಾ ಲ್ಯಾಬ್ಸ್ ಲಿಮಿಟೆಡ್ ಕಂಪನಿಯಲ್ಲಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಆಂಧ್ರದ ಅನಕಾಪಲ್ಲಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಒಬ್ಬ ಕಾರ್ಮಿಕ ಗಂಭೀರ ಗಾಯಗೊಂಡಿದ್ದಾನೆ. ನಿರ್ವಹಣೆ ಕಾರ್ಯ ನಡೆಯುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ರಾಜ್ಯ ಕೈಗಾರಿಕಾ ಸಚಿವ ಅಮರನಾಥ್ ಈ ಬಗ್ಗೆ ಮಾತಾನಾಡಿ, ಘಟನೆಯಲ್ಲಿ ಗಂಭೀರ ಗಾಯಗೊಂಡ ಕಾರ್ಮಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಈ ಅವಘಡದ ಬಗ್ಗೆ ಸಿಎಂ ಜಗನ್‌ ಅವರಿಗೆ ಮಾಹಿತಿ ನೀಡಿದ್ದೇನೆ. ಸಿಎಂ ಮೃತ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರವವನ್ನು ಘೋಷಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.ಅವಘಡದ ಕಾರಣವನ್ನು ತಿಳಿಯಲು ತನಿಖೆಗೆ ಆದೇಶಿಸಲಾಗಿದೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *