Breaking News

ದ್ವಿಚಕ್ರ ವಾಹನಗಳನ್ನು ಟಾರ್ಗೆಟ್ : ಕಳ್ಳ ಅರೆಸ್ಟ್


ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. 22 ವರ್ಷದ ಸೂರ್ಯ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಆರೋಪಿಯು, ಮನೆ ಮುಂದೆ ನಿಲ್ಲಿಸಿದ ದ್ವಿಚಕ್ರ ವಾಹನಗಳನ್ನೇ ಟಾರ್ಗೆಟ್ ಮಾಡಿ ಕದ್ದು ಎಸ್ಕೇಪ್ ಆಗುತ್ತಿದ್ದ. ಈ ಸಂಬಂಧ ಗಾಡಿ ಕಳೆದುಕೊಂಡ ಸಂತ್ರಸ್ತರೊಬ್ಬರು ಸ್ಥಳೀಯ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದರು. ದೂರಿನ ಅನ್ವಯ ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 6 ಲಕ್ಷ ಬೆಲೆ ಬಾಳುವ 10 ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನೂ ಆರೋಪಿ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

ಆರ್.ಅಶೋಕ್

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *