Breaking News

ಇಂದಿನಿಂದ ಡಿ. 29ರವರೆಗೆ ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ


ಬೆಂಗಳೂರು : ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಸಿಂಚನವಾಗುತ್ತಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕೂಡ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 29ರವರೆಗೆ ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇಂದು (ಡಿ. 27) ಮತ್ತು ಡಿ. 28ರಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಡಿ. 30ರವರೆಗೂ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಇನ್ನೂ 3 ದಿನ ತುಂತುರು ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *