ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜಧಾನಿ ಬೆಂಗಳೂರಲ್ಲಿ ಇಂದು (ಡಿ.27) ಮತ್ತು ನಾಳೆ (ಡಿ.28) ಮಳೆಯಾಗುವ ಸಾಧ್ಯಾತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು (ಡಿ.27) ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು ಮತ್ತು ರಾಮನಗರದಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯಾತೆ ಇದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಕೂಡ ಒಣಹಣೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರುನಲ್ಲಿ ಇಂದು ಕನಿಷ್ಠ ತಾಪಮಾನ 19 ಗರಿಷ್ಠ ತಾಪಮಾನ 26 ಡಿಗ್ರಿ ಇದ್ದು, ಚಳಿಯ ವಾತಾವರಣ ಇರಲಿದೆ. ಇಂದು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು ಕೆಲವೊಮ್ಮೆ ಹಗುರದಿಂದ – ಸಾಧಾರಣ ಮಳೆಯಾಗುವ ಸಾಧ್ಯಾತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

