Breaking News

ಕುಡಿಯುವ ನೀರು ಪೂರೈಸದ ಹಿನ್ನಲೆ ವಿಭಿನ್ನ ಪ್ರತಿಭಟನೆ

ಧಾರವಾಡ : ಕಳೆದ 10 ದಿನಗಳಿಂದ ಕುಡಿಯುವ ನೀರು ಪೂರೈಸದ ಹಿನ್ನೆಲೆಯಲ್ಲಿ ಸಾಧನಕೇರಿ ಸೇರಿದಂತೆ ವಿವಿಧ ಏರಿಯಾ ನಿವಾಸಿಗಳು ಗೋವಾ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಎಲ್‌ ಆ್ಯಂಡ್ ಟಿ ಕಂಪನಿಗೆ ಜಲಮಂಡಳಿ ನಿರ್ವಹಣೆ ಜವಾಬ್ದಾರಿ ವಹಿಸಿದಾಗಿನಿಂದ ಹುಬ್ಬಳ್ಳಿ, ಧಾರವಾಡ ಅವಳಿನಗರದ ಜನತೆ ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು. ಎಲ್ ಆ್ಯಂಡ್ ಟಿ ಕಂಪೆನಿ ವಿರುದ್ಧ ಧಿಕ್ಕಾರ ಕೂಗಿದರು. ಮಹಾನಗರ ಪಾಲಿಕೆ ಕೂಡಲೇ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು. ಈಗಾಗಲೇ ಎಲ್ಲ ಕಡೆ ಕುಡಿಯುವ ನೀರಿಗಾಗಿ ಜನ ತೊಂದರೆಗೀಡಾಗಿದ್ದಾರೆ.‌ ಜನ ರೊಚ್ಚಿಗೇಳುವ ಮುನ್ನ ಮಹಾನಗರ ಪಾಲಿಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದರು.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *