ಅಮರಾವತಿ: ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಬುಧವಾರ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ರೋಡ್ ಶೋನಲ್ಲಿ ನಡೆದ ಕಾಲ್ತುಳಿತ ಘಟನೆಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ.
ವಿರೋಧ ಪಕ್ಷದ ನಾಯಕ ನಾಯ್ಡು ಅವರು ನೆಲ್ಲೂರಿನಲ್ಲಿ ರೋಡ್ ಶೋ ನಡೆಸುತ್ತಿದ್ದಾಗ ಕಾಲ್ತುಳಿತದ ಘಟನೆ ನಡೆದಿದೆ.ರೋಡ್ ಶೋ ಸಮಯದಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಘಟನೆಯ ಬಗ್ಗೆ ನಾಯ್ಡು ದುಃಖ ವ್ಯಕ್ತಪಡಿಸಿದರು ಮತ್ತು ತಕ್ಷಣವೇ ಸಭೆಯನ್ನು ರದ್ದುಗೊಳಿಸಿದರು. ಟಿಡಿಪಿ ಮುಖ್ಯಸ್ಥರು ಮೃತರ ಕುಟುಂಬಕ್ಕೆ 10 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದರು. ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಕೊಡಿಸುವಂತೆ ನಾಯ್ಡು ಟಿಡಿಪಿ ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

