Breaking News

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕುರಿತು ಚರ್ಚೆ


ಬೆಳಗಾವಿ : ಸುವರ್ಣಸೌಧದಲ್ಲಿ ಇಂದು ಸಂಜೆ 5 ಗಂಟೆಗೆ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಸಭೆಯಲ್ಲಿ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿದೆ. ಬೆಳಗಾವಿ ಚಳಿಗಾಲದ ಅಧಿವೇಶನ ಇಂದೇ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ನಿಗದಿತ ಅವಧಿಗಿಂತ ಒಂದು ದಿನ ಮೊದಲೇ ಅಧಿವೇಶನ ಅಂತ್ಯಗೊಳ್ಳುವ ಸಾಧ್ಯತೆ ಇದೆ.

ಡಿ.17 ರಿಂದ ಆರಂಭವಾಗಿರುವ ಅಧಿವೇಶನ ಡಿ.30 ರವರೆಗೆ ನಿಗದಿಯಾಗಿತ್ತು, ಆದರೆ ಒಂದು ದಿನ ಮೊದಲೇ ಅಂದರೆ ನಾಳೆ ಅಧಿವೇಶನ ಅಂತ್ಯಗೊಳ್ಳುವ ಸಾಧ್ಯತೆ ಇದೆ. ಕೋವಿಡ್ ಸೋಂಕು ಉಲ್ಪಣ ಹಾಗೂ ಮಾರ್ಗಸೂಚಿ ಪಾಲನೆ ಹಿನ್ನೆಲೆ ಒಂದು ದಿನ ಮೊದಲೇ ಚಳಿಗಾಲದ ಅಧಿವೇಶನ ಸಮಾಫ್ತಿಗೊಳ್ಳಲಿದೆ ಎನ್ನಲಾಗಿದೆ. ಸದನ ಸಲಹಾ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *