Breaking News

ಜ. 27 ರಂದು ಹಂಪಿ ಉತ್ಸವ : ಸಿಎಂ


ಬೆಳಗಾವಿ : ಜನವರಿ 27 ರಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಸಂಸ್ಥೆಗಳ ಸಚಿವೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು.

ಬುಧವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಜಯನಗರ ಜಿಲ್ಲಾಡಳಿತದ ಅಧಿಕಾರಿಗಳ ಜೊತೆ ಸಭೆ ನಡೆಸಿ ಹಂಪಿ ಉತ್ಸವದ ಸಿದ್ದತೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.

ಕೋವಿಡ್ ನಂತರ ಮತ್ತು ವಿಜಯನಗರ ಜಿಲ್ಲೆ ಹೊಸದಾಗಿ ನಿರ್ಮಾಣವಾದ ನಂತರ ನಡೆಸುತ್ತಿರುವ ಹಂಪಿ ಉತ್ಸವ ಇದಾಗಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ಅದ್ದೂರಿಯಾಗಿ ಉತ್ಸವ ಆಚರಣೆಗೆ ಸೂಚನೆ ನೀಡಲಾಗಿದ್ದು ಅಗತ್ಯ ಸಿದ್ದತೆಗಳನ್ನು ಚುರುಕುಗೊಳಿಸುವಂತೆ ಇಂದು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗೆÉ ಸಚಿವರು ಸೂಚನೆ ನೀಡಿದರು.

ಮುಖ್ಯಮಂತ್ರಿಗಳಿಂದ ಉದ್ಘಾಟನೆ: ಕಳೆದ ಬಾರಿ ವಿಜಯನಗರ ಜಿಲ್ಲೆಯಲ್ಲಿ ನಡೆಸಿದ ಸಭೆಯಲ್ಲಿ ಜನವರಿ 27, 28 ಮತ್ತು 29 ರಂದು ಹಂಪಿ ಉತ್ಸವ ಆಚರಣೆಗೆ ದಿನಾಂಕ ನಿಗದಿಪಡಿಸಲಾಗಿತ್ತು. ಬುಧವಾರ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿದ್ದು, ಅವರು ಜನವರಿ 27 ರಂದು ಉದ್ಘಾಟನೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದರು.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *