ಹುಬ್ಬಳ್ಳಿ: ಕಳಸಾ ಬಂಡೂರಿ ಯೋಜನೆಯ ಡಿಪಿಆರ್ ಗೆ ಕೇಂದ್ರದಿಂದ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಮಾಡಲಾಯಿತು.
ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಸಿಹಿ ಹಂಚಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ ಪ್ರಧಾನಿ ನರೇಂದ್ರ ಮೋದಿ,ಕೇಂದ್ರ ಜಲಸಂಪನ್ನೂಲ ಸಚಿವರಿಗೆ ಜಯಕಾರ ಕೂಗಿದರು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್ ತೆಂಗಿನಕಾಯಿ, ನಾಲ್ಕು ದಶಕದ ರೈತರ ಹೋರಾಟಕ್ಕೆ ಫಲ ಸಿಕ್ಕಿದೆ. ಈ ಒಂದು ಹೋರಾಟಕ್ಕೆ ಬಿಜೆಪಿ ಸೇರಿದಂತೆ ರೈತರು, ಹಲವಾರು ಸಂಘಟನೆಗಳು ಹೋರಾಟ ನಡೆಸಿದ್ದರು. ಈ ಹೋರಾಟಕ್ಕೆ ಅಂತ್ಯ ಕಾಣಿಸುವ ಕೆಲಸ ನರೇಂದ್ರ ಮೋದಿ ಸರ್ಕಾರ ಮಾಡಿದೆ. ಪ್ರಲಾದ್ ಜೋಶಿ, ಗೋವಿಂದ ಕಾರಜೋಳ, ಬೊಮ್ಮಯಿ, ಜಗದೀಶ್ ಶೆಟ್ಟರ್ ರವರ ಸುದಿರ್ಗ ಪ್ರಯತ್ನದಿಂದ ತಾರ್ಕಿಕ ಅಂತ್ಯ ಕಂಡಿದೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

