ಬೆಳಗಾವಿ: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಪ್ರಸ್ತಾವನೆ ನಮ್ಮ ಸರ್ಕಾರದ ಮುಂದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಹೇಳಿಕೆಯನ್ನು ವಿರೋಧಿಸಿ ಆಡಳಿತ ಪಕ್ಷಗಳ ಸದಸ್ಯರು ಸೇರಿದಂತೆ ಹಲವರು ಸಭಾತ್ಯಾಗ ನಡೆಸಿದ ಪ್ರಸಂಗ ವಿಧಾನ ಪರಿಷತ್‍ನಲ್ಲಿ ನಡೆಯಿತು.
ಪ್ರಶ್ನೋತ್ತರದ ಅವಧಿಯಲ್ಲಿ ತಳವಾರ್ ಸಾಬಣ್ಣ, 2006ರ ನಂತರ ನೇಮಕವಾದ ರಾಜ್ಯ ಸರ್ಕಾರಿ ನೌಕರರಿಗೆ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆ (ಎನ್ ಪಿಎಸ್) ಅನ್ನು ಹಳೆ ಪಿಂಚಣಿ (ಓಪಿಎಸ್) ಗೆ ಪರಿವರ್ತನೆ ಮಾಡುವ ಕುರಿತು ಸರ್ಕಾರದ ನಿಲುವೇನು ಎಂದು ಪ್ರಶ್ನಿಸಿದರು.
ಇದಕ್ಕೆ ಮುಖ್ಯಮಂತ್ರಿಯವರ ಪರವಾಗಿ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, 2004ರಲ್ಲಿ ಕೇಂದ್ರ ಸರ್ಕಾರ ಪಿಂಚಣಿ ಕೊಡೋಕೆ ಆಗಲ್ಲ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ನಂತರ 2006ರಲ್ಲಿ ರಾಜ್ಯ ಸರ್ಕಾರಗಳು ಅದನ್ನು ಜಾರಿ ಮಾಡಿವೆ ಎಂದರು.
ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಹಂತದಲ್ಲಿ ಹೊರಡಿಸಲಾದ ಅಧಿಸೂಚನೆಯಲ್ಲಿ ಹೊಸ ಪಿಂಚಣಿ ಯೋಜನೆ ಅಳವಡಿಕೆಯಾಗಿರುವ ಕುರಿತು ಮಾಹಿತಿ ನೀಡಲಾಗಿದೆ. ಹಳೆ ಪಿಂಚಣಿ ವ್ಯವಸ್ಥೆ ಕೇಳಬಾರದು ಎಂಬ ಷರತ್ತನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಅದನ್ನು ಒಪ್ಪಿಕೊಂಡೇ ಸೇವೆಗೆ ಸೇರಿರುತ್ತಾರೆ. ಅದನ್ನು ಮರೆತು ಈಗ ಹಳೆ ಪಿಂಚಣಿ ಕೇಳುವುದು ಕಾನೂನು ಸಚಿವರಾಗಿ ನನಗೆ ಸರಿ ಅನಿಸುತ್ತಿಲ್ಲ. ಸರ್ಕಾರಿ ನೌಕರರಿಗೆ ಅದು ಸೌಜನ್ಯವೂ ಅಲ್ಲ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

