ವಿಜಯಪುರ: ನಡೆದಾಡುವ ದೇವರು ಎಂದು ಕರೆಯಲ್ಪಡುವ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯ ವಿಚಾರವಾಗಿ ಕೆಲ ದಿನಗಳ ಹಿಂದೆ ವದಂತಿಗಳು ಕೇಳಿಬಂದಿದ್ದವು.
ಬಳಿಕ ಅವರು ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಅನಾರೋಗ್ಯ ಎಂಬ ಮಾತು ಕೇಳಿಬರುತ್ತಿದ್ದಂತೆ ಸಾವಿರಾರು ಭಕ್ತರಲ್ಲಿ ಆತಂಕ ಉಂಟಾಗಿತ್ತು. ಹೀಗಾಗಿ ಸ್ವಾಮೀಜಿಯವರನ್ನು ನೋಡಲು ಬೇರೆ ಬೇರೆ ರಾಜ್ಯಗಳಿಂದ, ಜಿಲ್ಲೆಗಳಿಂದ ಶ್ರೀಗಳ ದರ್ಶನಕ್ಕೆ ಅಪಾರ ಪ್ರಮಾಣದ ಜನರು ಹರಿದು ಬರುತ್ತಿದ್ದಾರೆ. ಜೊತೆಗೆ ಹಾಲಿ, ಮಾಜಿ ಶಾಸಕರು ಹಾಗೂ ಸಚಿವರುಗಳು ಸಹ ಶ್ರೀಗಳನ್ನು ಭೇಟಿ ಮಾಡಿ ಅವರ ಆರೋಗ್ಯ ಕುಶಲೋಪಾರಿ ವಿಚಾರಿಸಿದ್ದಾರೆ.
ಅನಾರೋಗ್ಯ ಹಿನ್ನೆಲೆ ಜಿಲ್ಲೆಯ ಜ್ಞಾನ ಯೋಗಾಶ್ರಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಸಾರ್ಮಜನಿಕವಾಗಿ ಅವರು ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಮತ್ತು ಪ್ರಚನವನ್ನು ಸಹ ನೀಡಿರಲಿಲ್ಲ. ಆದರೆ ಇಂದು(ಡಿ. 30) ಮೊದಲ ಮಹಡಿಯಿಂದಲೇ ಸಾವಿರಾರು ಭಕ್ತರಿಗೆ ದರ್ಶನ ನೀಡಿದ್ದಾರೆ. ಮೊದಲ ಮಹಡಿಯ ಗೋಡೆ ತೆರವು ಮಾಡಿ ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೊದಲ ಮಹಡಿಯಲ್ಲಿ ವೀಲ್ ಚೇರ್ನಲ್ಲಿ ಕುಳಿತು ಭಕ್ತರಿಗೆ ದರ್ಶನ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

