Breaking News

ಅಮಿತ್‌ ಶಾ ಕಾಲಿಟ್ಟ ಮೇಲೆ ಸುನಾಮಿಯಾಗಿ ಪರಿವರ್ತನೆಯಾಗಿದೆ : ಬೊಮ್ಮಾಯಿ



ಮಂಡ್ಯ : ಬಿಜೆಪಿಯ ಗಾಳಿ ಎಲ್ಲೆಡೆ ಬೀಸುತ್ತಿದೆ. ಅಮಿತ್‌ ಶಾ ಕಾಲಿಟ್ಟಮೇಲೆ ಸುನಾಮಿಯಾಗಿ ಪರಿವರ್ತನೆಯಾಗಿದೆ. ಅಮಿತ್‌ ಶಾ ಅವರ ತಂತ್ರಗಳಿಗೆಲ್ಲಾ ಯಶಸ್ಸು ಸಿಗುತ್ತಿದ್ದು, 2023ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ‍್ಯ ಚಂದ್ರರಿರುವಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿವಿ ಆವರಣದಲ್ಲಿ ಶುಕ್ರವಾರ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂಗ್ರೆಸ್‌, ಜೆಡಿಎಸ್‌ ಆಡಳಿತದಿಂದ ಈ ಭಾಗದ ಜನರು ಬೇಸತ್ತಿದ್ದಾರೆ. ಈ ಭಾಗದ ಜನರ ಸಮಸ್ಯೆಗಳಿಗೆ ಅವರೆಂದಿಗೂ ಪರಿಹಾರ ದೊರಕಿಸಲಿಲ್ಲ.

ಅಧಿಕಾರದುದ್ದಕ್ಕೂ ಭ್ರಷ್ಟಾಚಾರವನ್ನೇ ನಡೆಸಿಕೊಂಡು ಬಂದರು. ಅದಕ್ಕಾಗಿ ಈಗ ಜನರು ಬಿಜೆಪಿ ಕಡೆ ನೋಡುತ್ತಿದ್ದಾರೆ ಎಂದರು. ನಮ್ಮದು ಡಬಲ್‌ ಎಂಜಿನ್‌ ಸರ್ಕಾರ. ನಾವು ಅಧಿಕಾರಕ್ಕೆ ಬಂದ ನಂತರ ಬೆಂಗಳೂರು-ಮೈಸೂರು ನಡುವೆ ಎಕ್ಸ್‌ಪ್ರೆಸ್‌ ಹೈವೇ ನಿರ್ಮಿಸಿದ್ದೇವೆ. ಶೀಘ್ರದಲ್ಲೇ ಲೋಕಾರ್ಪಣೆ ಮಾಡಲಿದ್ದೇವೆ. ವಿ.ಸಿ.ನಾಲೆಗಳ ಆಧುನೀಕರಣ, ಕೆಆರ್‌ಎಸ್‌ ಅಣೆಕಟ್ಟು ಗೇಟುಗಳ ಬದಲಾವಣೆ, ಸಣ್ಣ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಿ ಜಿಲ್ಲೆಗೆ ಅಭಿವೃದ್ಧಿಯ ಸ್ಪರ್ಶ ನೀಡಿದ್ದೇವೆ ಎಂದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *