ಗದಗ: ಪುತ್ರ ಶೋಕಂ ನಿರಂತರಂ ಎಂಬಂತೆ ತಂದೆ-ತಾಯಿ ಕಣ್ಮುಂದೆ ಮಕ್ಕಳು ಸಾವನ್ನಪ್ಪಬಾರದೆನ್ನುತ್ತಾರೆ. ಆದರೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಮಗನ ಸಾವಿನ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಇದರೊಂದಿಗೆ ತಾಯಿ, ಮಗ ಸಾವಿನಲ್ಲೂ ಒಂದಾಗಿದ್ದಾರೆ.
ಕಿಡ್ನಿ ವೈಫಲ್ಯದಿಂದ ಶಿವರುದ್ರಯ್ಯ ಅಂದಾನಯ್ಯ ಪೂಜಾರ್ (38) ಮೃತಪಟ್ಟಿದ್ದರು. ಮಗನ ಸಾವಿನ ಸುದ್ದಿ ಕೇಳಿ, ಬಸಮ್ಮ ಅಂದಾನಯ್ಯ ಪೂಜಾರ್ (68) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತಾಯಿ ಹಾಗೂ ಮಗನ ಸಾವಿನಿಂದ ಇಡೀ ಗ್ರಾಮದಲ್ಲಿ ಶೋಕ ಸಾಗರದಲ್ಲಿ ಮುಳಗಿದೆ. ತಾಯಿ ಹಾಗೂ ಮಗನ ಶವಗಳಿಗೆ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

