Breaking News

ಅಮಿತ್ ಶಾ ಬಂದು ಮಾಯ, ಮಂತ್ರ ಮಾಡ್ತಾರಾ : ಸಿದ್ದರಾಮಯ್ಯ


ದಾವಣಗೆರೆ : ಬಿಜೆಪಿಯವರು ನಾಟಕ, ಗಿಮಿಕ್ ಮಾಡುವುದನ್ನು ಬಿಡಬೇಕು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದರೂ ಬಿಜೆಪಿ ಗೆಲ್ಲುವುದಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಮಾಯ, ಮಂತ್ರ ಮಾಡ್ತಾರಾ. ಅವರೇನೂ ಮಾಯಮಂತ್ರದ ತಂಡ ಇಟ್ಟುಕೊಂಡಿದ್ದಾರಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ನಗರದ ಬಾಪೂಜಿ ಕಾಲೇಜಿನ ಎಂಬಿಎ ಗ್ರೌಂಡ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಮಂತ್ರಿಯಾಗಿರುವ ಕಾರಣಕ್ಕೆ ಆಹ್ವಾನ ನೀಡಿರುವುದಕ್ಕೆ ರಾಜ್ಯಕ್ಕೆ ಬಂದಿದ್ದಾರೆ. ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶಕ್ಕೂ ಅಮಿತ್ ಶಾ ಹೋಗಿಬಂದಿದ್ದರು. ಅಲ್ಲೇನಾಯ್ತು ಎನ್ನುವುದು ಎಲ್ಲರಿಗೂ ಗೊತ್ತಿರ ವಿಚಾರ. ಬಂದಾಕ್ಷಣ ಮೈಸೂರು ಭಾಗದಲ್ಲಿ ಬಿಜೆಪಿಯವರು ಗೆದ್ದು ಬಿಡುತ್ತಾರಾ ಎಂದು ಹೇಳಿದರು. ಮಹಾದಾಯಿ ಯೋಜನೆ ಸಮಗ್ರ ಯೋಜನಾ ವರದಿಗೆ ಒಪ್ಪಿಗೆ ಪಡೆಯಲು ಎರಡು ವರ್ಷ ಬೇಕಾಯ್ತಾ..? ಇಷ್ಟು ಸಮಯ ಯಾಕೆ ಮಾಡಿರಲಿಲ್ಲ ಎಂದು ಪ್ರಶ್ನಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *