Breaking News

ಕುಡಿಯುವ ನೀರಿನ ಸಮಸ್ಯೆ : ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಕಳೆದ ಒಂದು ತಿಂಗಳಿನಿಂದಲ್ಲೂ ಬಹುತೇಕವಾಗಿ ಎಲ್ಲಾ ವಾರ್ಡ್ ಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ವಾರಕ್ಕೆ ಒಮ್ಮೆ ಬಿಡುತ್ತಿದ್ದ ನೀರು, ಈಗ ೧೫ ದಿನಗಳಾದರೂ ನೀರು ಬರುತ್ತಿಲ್ಲ ಎಂಬ ಹಿನ್ನೆಲೆಯಲ್ಲಿ ಇಂದು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು.

ಭೂತ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ನೇತೃತ್ವದಲ್ಲಿ ಒಂದು ಸಾವಿರ ಪ್ರದರ್ಶನ ಮಾಡುವ ಮೂಲಕ ಮಹಾನಗರ ಪಾಲಿಕೆಗೆ ಹಿಡಿ ಶಾಪ ಹಾಕಿದರು. ಪ್ರಮುಖವಾಗಿ ಈ ಹಿಂದೆ ಪಾಲಿಕೆ ಅಧೀನದಲ್ಲಿದ್ದ ನೀರು ಸರಬರಾಜು ಈಗ ಖಾಸಗಿ ಕಂಪನಿಗೆ ನೀಡಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸರಿಯಾದ ಮಾಹಿತಿ ಕೊರತೆಯಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಈ ಕೂಡಲೇ ನೀರಿನ ಸಮಸ್ಯೆಯನ್ನು ಬಗೆಹರಿಸಲು ಎಲ್ ಅಂಡ್ ಟಿ ಕಂಪನಿ ಹಳೆಯ ಸಿಬ್ಬಂದಿಗಳನ್ನು ಮರು ನೇಮಕ ಮಾಡಬೇಕೆಂದು ಆಗ್ರಹಮಾಡಿದರು.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *