ಹುಬ್ಬಳ್ಳೀ: ಹು-ಧಾ ಮಹಾನಗರ ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿಯಾಗಿ ರೂಪಿಸಲು, ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಪೋಲಿಸ್ ಆಯುಕ್ತ ರಮಣ್ ಗುಪ್ತಾ ಹೇಳಿದರು. ಇಂದು ನವನಗರದ ಪೊಲೀಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ
ಹು-ಧಾ ದಲ್ಲಿ ಪೊಲೀಸ್ ಇಲಾಖೆಯಿಂದ ಉತ್ತಮ ಕೆಲಸ ನಡೆಯುತ್ತಿದೆ. ಅದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲಾಗುವುದು ಎಂದರು. ಅಪರಾಧ ಮತ್ತು ಟ್ರಾಫಿಕ್ ವಿಷಯಕ್ಕೆ ಸಂಬಂಧಿಸಿದಂತೆ ಆಧುನಿಕ ತಂತ್ರಜ್ಞಾನ ಬಳಸಿ ತನಿಖೆಯಲ್ಲಿ ವೇಗ ಹೆಚ್ಚಳ ಮಾಡಲಾಗುವುದು. ಪೆಟ್ರೋಲಿಂಗ್ ಮತ್ತು ಬಿಟ್ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಣೆ ಮಾಡಲು ಪ್ರಯತ್ನ ಮಾಡಲಾಗುವುದು. ಕಳೆದ ವರ್ಷ 959 ಪ್ರಕರಣಗಳಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿದೆ. ರೌಡಿಶೀಟರ್ ಗಳನ್ನು ಬಂಧನ ಮಾಡಿ ಬಿಸಿ ಮುಟ್ಟಿಸಲಾಗಿದೆ ಎಂದು ಹೇಳಿದರು. ಗಾಂಜಾ, ಅಫಿಮು ಸೇರಿದಂತೆ ಮಾದಕ ವಸ್ತುಗಳ ತಡೆಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು, ಇದಕ್ಕೆ ಸಾರ್ವಜನಿಕರ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಸೈಬರ್ ಕ್ರೈಂ, ಅಪರಾಧ ಚಟುವಟಿಕೆಗಳಲ್ಲಿ ಯುವ ಸಮೂದಾಯ, ವಿದ್ಯಾರ್ಥಿಗಳು ಭಾಗಿಯಾಗುತ್ತಿರುವ ಹಿನ್ನೆಲೆ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಜಾಗೃತಿ ಕಾರ್ಯಕ್ರಮ ಮಾಡಲಾಗುವುದು. ಏನಾದರೂ ಕಾನೂನು ಸುವ್ಯವಸ್ಥೆಗೆ ದಕ್ಕೆ ಬರುವ ರೀತಿಯಲ್ಲಿ ಯಾರಾದರೂ ವರ್ತಿಸಿದರೇ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ರಮಣ್ ಗುಪ್ತ ಖಡಕ್ ಎಚ್ಚರಿಕೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

