Breaking News

ಭ್ರಷ್ಟ ಬೀಜಾಸುರರ ಪಕ್ಷ ಕಾಂಗ್ರೆಸ್, ಕೇಂದ್ರ ಸಚಿವ ಜೋಶಿ ಕಿಡಿ

ಹುಬ್ಬಳ್ಳಿ: ದೇಶದಲ್ಲಿ ಭ್ರಷ್ಟಾಚಾರದ ರಕ್ತ ಬೀಜಾಸುರರು ಎಂದರೆ ಅದು ಕಾಂಗ್ರೆಸ್ ಪಾರ್ಟಿ. ಕಾಂಗ್ರೆಸ್ ಭ್ರಷ್ಟಾಚಾರದ ಪಕ್ಷವಾಗಿದೆ. ದೆಹಲಿಯಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಮನೆಯ ಮುಂದೆ ಅಲೆದಾಡುವುದನ್ನ ನೋಡಿದರೆ ತಿಳಿಯುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದುಡ್ಡ ತೆಗೆದುಕೊಂಡು ಟಿಕೆಟ್ ನೀಡುತ್ತಾರೆ. ಈ ಬಗ್ಗೆ ಅವರ ಪಕ್ಷದಲ್ಲಿ ಗವರ್ನರ್ ಆದವರು ಈ ರೀತಿ ಹೇಳುತ್ತಾರೆ. ಕಾಂಗ್ರೆಸ್ ಆಧಾರ ರಹಿತ ಆರೋಪ ಮಾಡುವುದು ರೂಢಿಯಾಗಿದೆ. ದೇಶ ಹಾಗೂ ರಾಜ್ಯದಲ್ಲಿ ಅವರ ಕಾಲದಲ್ಲಿ ಭ್ರಷ್ಟಾಚಾರ ಆರಂಭವಾಗಿದೆ. ಮಾಜಿ ಪ್ರಧಾನಿ ನೆಹರೂರಿಂದ ಹಿಡಿದುಕೊಂಡು ಇವರ ಕಾಲದ ತನಕ ಹಗರಣಗಳನ್ನು ಮಾಡಿದ್ದಾರೆ. ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರಿಂದ ಹಿಡಿದು ಖರ್ಗೆವಯವರ ಕಾಲದಲ್ಲಿ ಭ್ರಷ್ಟಾಚಾರಮಯ ವ್ಯವಸ್ಥೆ ನಿರ್ಮಾಣ ಮಾಡಿದ್ದಾರೆ ಎಂದರು. ಮೋದಿ ಮುಂದೆ ಸಚಿವರು ಸೈಲೆಂಟ್ ಎಂಬುವಂತ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಯಾದವರು. ಘನತೆ ಗೌರವ ಇಟ್ಟುಕೊಂಡು ಮಾತನಾಡಬೇಕು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರು ಬಹಳ ಕೀಳಾಗಿ ಇವರ ಜೊತೆ ನಡೆದುಕೊಳ್ಳುತ್ತಿದ್ದರು. ಕಾಂಗ್ರೆಸ್ ನಲ್ಲಿ ಗುಲಾಮಿತನವಿದೆ ಎಂದು ಅವರು ಹೇಳಿದರು.

ರಾಹುಲ್ ಹಾಗೂ ಸೋನಿಯಾ ಗಾಂಧಿ ಅವರು ಚುನಾಯಿತ ಪ್ರತಿನಿಧಿಗಳು ಅಲ್ಲ. ಖರ್ಗೆ ಅವರ ತಂದೆಯೂ ಸಹ ಗಾಂಧಿ ಪರಿವಾರ ಆಶೀರ್ವಾದದಿಂದ ಬಂದಿದ್ದಾರೆ. ಅಲ್ಲಿಯ ನಾಯಕರು ಸ್ಪಷ್ಟವಾಗಿ ಹೇಳುತ್ತಿದ್ದಾರೆ. ನಮ್ಮದೇನು ನಡೆಯುವುದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ ಕಾರಿದರು.

Share News

About Shaikh BigTv

Check Also

ಹುಬ್ಬಳ್ಳಿ-ಧಾರವಾಡದಲ್ಲಿ ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆ

ಧಾರವಾಡ : ಹು-ಧಾ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಮಾರ್ಗದರ್ಶನದಲ್ಲಿ ಆಯುಕ್ತ ಡಾ: ಸಂತೋಷಕುಮಾರ ಬಿರಾದಾರ ಅವರು …

Leave a Reply

Your email address will not be published. Required fields are marked *

You cannot copy content of this page