Bangalore: ಕಾಂತಾರ ಸಿನಿಮಾ ರಿಲೀಸ್ ಆಗಿ 100 ದಿನಗಳನ್ನು ಪೂರೈಸಿದೆ. ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ದೊಡ್ಡ ಮಟ್ಟದ ಸಕ್ಸಸ್ ಕಂಡಿರುವ ಕಾಂತಾರ ಬಾಕ್ಸ್ ಆಫೀಸ್ ನಲ್ಲೂ ಭರ್ಜರಿ ಕಮಾಯಿ ಮಾಡಿದೆ. 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿರುವ ಕಾಂತಾರ ಅನೇಕ ದಾಖಲೆಗಳನ್ನು ಬರೆದಿದೆ. ಕೆಜಿಎಫ್ ಬಳಿಕ ಹೊಂಬಾಳೆ ಪ್ರೊಡಕ್ಷನ್ ನಲ್ಲಿ ಬಂದ ಬಹು ದೊಡ್ಡ ಸಕ್ಸಸ್‌ನ ಸಿನಿಮಾ.
ಕಾಂತಾರ ಮೊದಲು ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿತ್ತು. ಕನ್ನಡದಲ್ಲಿ ದೊಡ್ಡ ಮಟ್ಟದ ಸಕ್ಸಸ್ ಕಾಣುತ್ತಿದ್ದಂತೆ ಬೇರೆ ಬೇರೆ ಭಾಷೆಗಳಿಗೆ ಡಬ್ ಮಾಡಿ ಬಿಡುಗಡೆ ಮಾಡಲಾಯಿತು. ಬೇರೆ ಭಾಷೆಯಿಂದನೂ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಯಿತು. ಬಾಲಿವುಡ್ ನಲ್ಲಿ ಕಾಂತಾರ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಬಾಕ್ಸ್ ಆಫೀಸ್ ನಲ್ಲೂ ಉತ್ತಮ ಕಲೆಕ್ಷನ್ ಮಾಡಿದೆ. ಅಂದಹಾಗೆ ಕಾಂತಾರ ಸಿನಿಮಾ ಸೆಪ್ಟಂಬರ್ 30 2022ನಲ್ಲಿ ರಿಲೀಸ್ ಆಗಿದೆ. ಬಳಿಕ ಬೇರೆ ಬೇರೆ ಭಾಷೆಗಳಲ್ಲಿ ರಿಲೀಸ್ ಆಗಿದೆ.
ಸದ್ಯ 100 ದಿನಗಳನ್ನು ಪೂರೈಸಿದ ಕಾಂತಾರ ಸಿನಿಮಾದ ಬಗ್ಗೆ ರಿಷಬ್ ಶೆಟ್ಟಿ ವಿಶೇಷವಾಗಿ ಬರೆದುಕೊಂಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿಗಳಿಸಿರುವ ರಿಷಬ್ ಕಾಂತಾರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ‘ಬೆಳಕು.. ಆದರೆ ಇದು ಬೆಳಕಲ್ಲ 100 ದಿನದ ದರ್ಶನ’ ಎಂದು ಹೇಳಿದ್ದಾರೆ. ಡಿವೈನ್ ಬ್ಲಾಕ್ ಬಸ್ಟರ್ 100 ದಿನಗಳ ಆಚರಣೆ’ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

