ಹುಬ್ಬಳ್ಳಿ: ಸ್ಯಾಂಟ್ರೋ ರವಿ ವಿಚಾರದಲ್ಲಿ ಸೂಕ್ತ ತನಿಖೆ ಮಾಡಲಾಗಿದ್ದು, ಆತನ ಎಲ್ಲಾ ಆಸ್ತಿಪಾಸ್ತಿಗಳನ್ನ ಮುಟ್ಟು ಗೋಲು ಹಾಕಿಕೊಳ್ಳಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ತಿಳಿಸಿದ್ದಾರೆ. ಸ್ಯಾಂಟ್ರೋ ರವಿಗೆ 20 ವರ್ಷದ ಇತಿಹಾಸವಿದೆ. ಕಾಂಗ್ರೆಸ್ ಕಾಲದಲ್ಲೇ ಸ್ಯಾಂಟ್ರೋ ಹೆಚ್ಚಾಗಿದ್ದು, ಅವರ ಕಾಲದಲ್ಲೇ ಸ್ಯಾಂಟ್ರೋ ರವಿ ಜೈಲಿನಿಂದ ಹೊರಬಂದಿದ್ದಾನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿ ನಿವಾಸದಲ್ಲಿ ಮಾತನಾಡಿದ ಅವರು, ಸ್ಯಾಂಟ್ರೋ ವಿಚಾರದಲ್ಲಿ ಈಗಾಗಲೇ ಸೂಕ್ತ ತನಿಖೆ ಮಾಡಲಾಗಿದ್ದು. ಆತನ ಎಲ್ಲಾ ಆಸ್ತಿಪಾಸ್ತಿಗಳನ್ನ ಮುಟ್ಟು ಗೋಲು ಹಾಕಿಕೊಳ್ಳಲಾಗಿದೆ . ಆತ ಯಾರ ಜೊತೆಗೆ ನಂಟು ಹೊಂದಿದ್ದ, ಆತನ ಹಿನ್ನೆಲೆ ಏನು ಎಂಬುವುದು ಎಲ್ಲಾ ಗೊತ್ತಿದೆ ಎಂದರು.
ಮಹಾದಾಯಿ ವಿಚಾರ..
ಅರಣ್ಯ ಇಲಾಖೆ ಸ್ಪಷ್ಟನೆ ಕೇಳೋದು ಸಾಮಾನ್ಯ. ಈ ಹಿಂದೆ ಸಾಕಷ್ಟು ವಿಚಾರದಲ್ಲಿ ಸ್ಪಷ್ಟನೆ ಕೇಳಿದ್ದಾರೆ. ನಾವು ಸಮರ್ಥವಾಗಿ ಉತ್ತರ ನೀಡುತ್ತೇವೆ ಎಂದರು.
ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡುವುದು ಅವರ ವೈಯಕ್ತಿಕ ವಿಚಾರವಾಗಿದೆ. ಹೀಗಾಗಿ ಈ ಬಗ್ಗೆ ನಾನು ವ್ಯಾಖ್ಯಾನ ಮಾಡುವದಿಲ್ಲ. ಎಲ್ಲಾ ಕಡೆ ನಿಲ್ಲಲು ಅವರು ಸರ್ವ ಸ್ವತಂತ್ರರು. ಆದರೆ ತೀರ್ಮಾನವನ್ನು ಕೋಲಾರದ ಜನತೆ ಮಾಡುತ್ತಾರೆ ಎಂದರು.
ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ನಡೆಯುವ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಇದಕ್ಕೆ ಮಹತ್ವ ನೀಡಲಾಗಿದ್ದು ಮಾನವ ಸಂಪನ್ಮೂಲವೇ ಬಹು ದೊಡ್ಡ ಕೊಡುಗೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಶಯ ವ್ಯಕ್ತಪಡಿಸಿದ್ದಾರೆ ಎಂದರು.