Breaking News

ಭಿಕ್ಷುಕಿಯನ್ನು ಕಚ್ಚಿ ಎಳೆದಾಡಿದ ಬೀದಿ ನಾಯಿಗಳು

ಧಾರವಾಡ: ದಿಕ್ಕಿಲ್ಲದೇ ಮಲಗಿದ್ದ ಭಿಕ್ಷುಕಿ ಮೇಲೆ ನಾಯಿಯ ಗುಪೊಂದು ದಾಳಿ ಮಾಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಖಬರಸ್ತಾನ್ ಬಳಿ ಘಟನೆ ನಡೆದಿದೆ. ಭಿಕ್ಷುಕಿಯನ್ನು ಕಚ್ಚಿ ಎಳೆದಾಡಿದ ಬೀದಿ ನಾಯಿಗಳು, ಮಲಗಿದ್ದ ಭಿಕ್ಷುಕಿಯನ್ನು ಎಳೆದೊಯ್ದು ತಿಂದು ಹಾಕಿವೆ. ಇದರಿಂದ ಭಿಕ್ಷುಕಿ ಸ್ಥಳದಲ್ಲೇ ಸಾವನಾಪ್ಪಿದ್ದಾರೆ. ಘಟನೆ ನಡೆದ ಹಿನ್ನೆಲೆಯಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಮೃತಪಟ್ಟ ಮಹಿಳೆಯ ಹೆಸರು, ವಿಳಾಸ ಪತ್ತೆಯಾಗಿಲ್ಲ. ಈ ಕುರಿತು ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಸ್ನ್ಯಾಕ್ಸ್ ಪ್ಯಾಕೆಟ್‌ನಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಕಾಲೇಜು ಬಳಿ ಮಾರಾಟ: ಆರೋಪಿ ಬಂಧನ

ಬೆಳಗಾವಿ: ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಬಚ್ಚಿಟ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉದ್ಯಮಬಾಗ ಪೊಲೀಸರು …

Leave a Reply

Your email address will not be published. Required fields are marked *