ಧಾರವಾಡ: ಜಿಲ್ಲಾಧಿಕಾರಿಗಳ ಕಚೇರಿಯ ಮುಂಬಾಗದಲ್ಲಿ ರಾಜ್ಯದಲ್ಲಿ ಬೆಲೆ ಏರಿಕೆಯಿಂದ ಸಾಮಾನ್ಯ ಬಡಜನರಲ್ಲೂ ಮಧ್ಯಮವರ್ಗದ ಜನರಿಗೆ ಜೀವನ ನಡೆಸುವುದು ತುಂಬಾ ಕಷ್ಟವಾಗಿದೆ ಎಂದು ಇಂದಿನ ದಿನಮಾನದಲ್ಲಿ ಸಿಲೆಂಡರ್,ಪೆಟ್ರೋಲ್, ಡಿಸೇಲ್ ಹಾಗೂ ದಿನ ಬಳಕೆಯ ದಿನಸಿ ಪದಾರ್ಥಗಳ ಬೆಲೆಗಳು ಗಗನಕ್ಕೆ ಏರಿದ್ದು, ಜನಸಾಮಾನ್ಯರು ತಮ್ಮ ಜೀವನವನ್ನು ನಡೆಸುವುದು ತುಂಬಾ ಚಿಂತಾಜನಕವಾಗಿದೆ, ಆದ್ದರಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಈ ಎಲ್ಲಾ ಬೆಲೆ ಏರಿಕೆಯನ್ನು ಇಳಿಮುಖ ಮಾಡಿ ಆದೇಶ ಹೂರಡಿಸಬೇಕೆಂದು ಒತ್ತಾಯಿಸಿ ಧಾರವಾಡ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆಯ ಮುಖಾಂತರ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು .
ಎಲ್.ಪಿ.ಜಿ. ಗ್ಯಾಸ್ ಏರಿಕೆ ಖಂಡಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಈ ಕುರಿತು ಗಂಭೀರವಾಗಿ ಪರಿಗಣಿಸಬೇಕೆಂದು ಪಕ್ಷದಿಂದ ಒತ್ತಾಯ ಮಾಡಲಾಗುತ್ತಿದೆ. ಬೆಲೆ ಈ ಸಮಸ್ಯೆಗಳನ್ನು ಒಂದು ವಾರದೊಳಗೆ ಬೆಲೆ ಏರಿಕೆಯನ್ನು ಇಳಿಮುಖ ಮಾಡದಿದ್ದರೆ ಬೀದಿಗಿಳಿದು ಉಗ್ರ ಹೋರಾಟ ಮಾಡಲಾಗುತ್ತದೆ ಎಂದರು . ಶ್ರೀಮತಿ ಪೂರ್ಣಿಮಾ.ಮ. ಸವದತ್ತಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.