ಹುಬ್ಬಳ್ಳಿ: ಜನವರಿ 12 ನಾಳೆ ದಿನದಂದು ನಡೆಯುವ, ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬರುತ್ತಿರುವ ಹಿನ್ನೆಲೆಯಲ್ಲಿ, ನಗರದಲ್ಲಿನ ಎಲ್ಲ ಶಾಲಾ ಕಾಲೇಜುಗಳಿಗೆ ರಜಾ ಘೋಷಣೆ ಮಾಡಿದೆಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಹೇಳಿದರು.
ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾಳೆ ನಡೆಯುವ ಯುವ ಜನೋತ್ಸವ ಕಾರ್ಯಕ್ರಮ ಪ್ರಧಾನಿ ಮೋದಿಯವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ನಂತರ ರೋಡ್ ಮೂಲಕ ಬರುತ್ತಾರೆ. ಈ ಕಾರ್ಯಕ್ರಮಕ್ಕೆ 50 ಸಾವಿರಕ್ಕೂ ಹೆಚ್ಚು ಯುವಕರು ಯುವತಿಯರು ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ. ಈಗಾಗಲೇ ಬಸ್‌ಗಳಿಗೆ ಬೇರೆ ಮಾರ್ಗವನ್ನು ಸೂಚಿಸಿದೆ. ಇಲ್ಲಿ ಎಲ್ಲರಿಗೂ ಅವಕಾಶ ನೀಡಲಿದೆ. ರಾಜ್ಯ ಮತ್ತು ಅಂತರಾಜ್ಯದಿಂದ ಬರುತ್ತಿದ್ದಾರೆ. ಅವರಿಗೆಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

