ಹುಬ್ಬಳ್ಳಿ: ಹುಬ್ಬಳ್ಳಿಯ ರೇಲ್ವೆ ಮೈದಾನದಲ್ಲಿ ಯುವಜನೋತ್ಸವ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ದವಾಗಿದ್ದು, ಅದರಲ್ಲೂ ಜರ್ಮನ್ ಮಾದರಿಯಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಿದ್ದಾರೆ. 28 ರಾಜ್ಯಗಳು,6 ಕೇಂದ್ರಾಡಳಿತ ಪ್ರದೇಶದಿಂದ ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. ರೇಲ್ವೆ ಮೈದಾನದಲ್ಲಿ 30 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಯುವಜನೋತ್ಸವಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿ ಸಜ್ಜಾಗಿದೆ. ಮೋದಿ ಆಗಮನದ ಹಿನ್ನಲೆ ಕೇಸರಿ ಮಯವಾದ ಹುಬ್ಬಳ್ಳಿ, ಪ್ರಮುಖ ವೃತ್ತಗಳಲ್ಲಿ ಮೋದಿ ಬಂಟಿಂಗ್ಸ್,ಬ್ಯಾನರ್ ರಾರಾಜಸ್ತಿವೆ.
ಇನ್ನೂ ಯುವಜನೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ,ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ,ಕ್ರೀಡಾ ಸಚಿವ ನಾರಾಯಣ ಗೌಡ,ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಸೇರಿ ಗಣ್ಯರು ಭಾಗಿಯಾಗಲಿದ್ದಾರೆ.