ಧಾರವಾಡ ಜಿಲ್ಲೆಯ
ನವಲಗುಂದ ತಾಲೂಕಿನ ಯಮನೂರ ಗ್ರಾಮದ ಬೆಣ್ಣೆ ಹಳ್ಳದ ಸೇತುವೆಯ ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಲಾರಿ ಹಾಗೂ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ.
ನರಗುಂದ ಕಡೆ ತೆರಳುತ್ತಿದ್ದ ಲಾರಿ ಹಾಗೂ ಹುಬ್ಬಳ್ಳಿ ಕಡೆಗೆ ಹೊರಟಿದ್ದ ರಿಕ್ಷಾ ನಡುವೆ ಅಪಘಾತ ಸಂಭವಿಸಿದ್ದು, ರಿಕ್ಷಾ ದಲ್ಲಿರುವ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿದ್ದು, ಗಾಯಾಳುಗಳನ್ನು ನವಲಗುಂದ ತಾಲೂಕ ಆಸ್ಪತ್ರೆಗೆ ರವಾನಿಸಲಾಗುತ್ತಿದೆ.
