ಹುಬ್ಬಳ್ಳಿ: ವಾಣಿಜ್ಯ ನಗರೀ ಹುಬ್ಬಳ್ಳಿಯಲ್ಲಿ ಯುವಜನೋತ್ಷವ ಕಾರ್ಯಕ್ರಮ ಆಯೋಜಿಸಲಾಗಿದೆ. ಇವೊಂದು ಕಾರ್ಯಕ್ರಮ ಉದ್ಘಾಟನಾ ಸಮಾರಂಭಕ್ಕೆ ಮೋದಿ ಆಗಮಿಸುತ್ತಿದ್ದಾರೆ. ಆದ್ರೇ ನಗರದ ಕೆಲವರು ಮೋದಿ ಗೋಬ್ಯಾಕ್ ಎಂದು ಘೋಷಣೆ ಕೂಗುತ್ತಿದ್ದಾರೆ. ಇನ್ನೂ ನಗರದ ಮಿನಿ ಸೌಧದ ಎದುರು ಖಾಲಿ ಬಿಂದಿಗೆ, ಹಾಗೂ ಅಣುಕು ಪ್ರದರ್ಶನದ ಫೋಸ್ಟರ್ ಹಿಡಿದು ಕಾಂಗ್ರೆಸ್ ಕಾರ್ಯ ಕರ್ತರು, ಮಹಿಳೆಯರು ಹಾಗೂ ಯುವಕರು ಪ್ರತಿಭಟನೆ ಮಾಡಿದರು. ಉದ್ಯೋಗ ಸೃಷ್ಟಿ ಎಂದು ಸುಳ್ಳು ಭರವಸೆ, ಬೆಲೆ ಎರಿಕೆ, ನೀರಿನ ಸಮಸ್ಯೆ, ಕಂಡಿಸಿ ಪ್ರತಿಭಟನೆ ಮಾಡಿದರು. ಪ್ರತಿಭಟನೆಯನ್ನು ಪಾಲಿಕೆ ಸದಸ್ಯ ಮೋಹನ್ ಹಿರೆಮನಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.
